ನಿರ್ಮಾಪಕ 'ರಾಕ್ಲೈನ್' ವಿರುದ್ಧ ಕೊಲೆ ಬೆದರಿಕೆ ದೂರು

ಬೆಂಗಳೂರು: ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ವಿರುದ್ಧ ವೇಗಸ್ ಆಸ್ಪತ್ರೆಯ ಅಧ್ಯಕ್ಷ ರಾಮೇಗೌಡ ಎಂಬುವವರು ಕೊಲೆಬೆದರಿಕೆ ದೂರು ದಾಖಲಿಸಿದ್ದಾರೆ.
ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ತಮಗೆ ಥಳಿಸಿದ್ದು, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವೇಗಸ್ ಆಸ್ಪತ್ರೆ ಅಧ್ಯಕ್ಷ ರಾಮೇಗೌಡ ದೂರು ನೀಡಿದ್ದಾರೆ. ಈ ಕುರಿತು ರಾಕ್ಲೈನ್ ವೆಂಕಟೇಶ್ ವಿರುದ್ಧ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ರಾಮೇಗೌಡ ದೂರು ಸಲ್ಲಿಸಿದ್ದಾರೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರಿಂದ ರಾಮೇಗೌಡ ಅವರು ಈ ಹಿಂದೆ ಸುಮಾರು 1.5 ಕೋಟಿ ರುಪಾಯಿ ಹಣವನ್ನು ಸಾಲಪಡೆದಿದ್ದರು. ಸಾಲ ಮರುಪಾವತಿ ವಿಳಂಬವಾದ ಕಾರಣ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮತ್ತು ರಾಮೇಗೌಡ ಅವರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ರಾಮೇಗೌಡರನ್ನು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೆ ಕೊಲೆ ರಾಮೇಗೌಡ ಅವರನ್ನು ರಾಕ್ಲೈನ್ ವೆಂಕಟೇಶ್ ಅವರು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


