ಬಾಂಗ್ಲಾ ಮಾಜಿ ಪ್ರಧಾನಿ ಖಲೇದಾ ಜಿಯಾಗೆ ಗೃಹ ಬಂಧನ

ಢಾಕಾ: ಬಾಂಗ್ಲಾದೇಶ ಮಾಜಿ ಪ್ರಧಾನಿ ಮತ್ತು ವಿರೋಧ ಪಕ್ಷದ ನಾಯಕಿ ಖಲೇದಾ ಜಿಯಾ ಅವರಿಗೆ ಗೃಹ ಬಂಧನ ವಿಧಿಸಲಾಗಿದೆ.
ಸರ್ಕಾರಿ ವಿರೋಧಿ ಪ್ರತಿಭಟನೆ ಮತ್ತು ಸಾರ್ವತ್ರಿಕ ಚುನಾವಣೆಯನ್ನು ಮುಂದೂಡುವಂತೆ ಆಗ್ರಹಿಸಿ ಖಲೇದಾ ಜಿಯಾ ಅವರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುವ ಭೀತಿಯಿಂದಾಗಿ ಮಾಜಿ ಪ್ರಧಾನಿ ಖಲೇದಾ ಜಿಯಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಢಾಕಾದ ಗುಲ್ಶನ್ ಮಾರುಕಟ್ಟೆ ಪ್ರದೇಶದಲ್ಲಿರುವ ಖಲೇದಾ ಜಿಯಾ ಅವರ ನಿವಾಸವನ್ನು ಭದ್ರತಾ ಪಡೆಗಳು ಈಗಾಗಲೇ ಸುತ್ತುವರೆದಿದ್ದು, ಖಲೇದಾ ಜಿಯಾ ಮತ್ತು ಅವರ ಕುಟುಂಬಸ್ಥರು ಹೊರಹೋಗದಂತೆ ನಿರ್ಭಂಧ ಹೇರಿದ್ದಾರೆ.
'ಭದ್ರತಾ ದೃಷ್ಠಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವುದಕ್ಕಾಗಿ ಮಾಜಿ ಪ್ರಧಾನಿ ಖಲೇದಾ ಜಿಯಾ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ' ಎಂದು ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
'ಇದೇ ಡಿಸೆಂಬರ್ 29ರಂದು ಖಲೇದಾ ಜಿಯಾ ಅವರು 'ಮಾರ್ಚ್ ಫಾರ್ ಡೆಮಾಕ್ರಸಿ' ಹಮ್ಮಿಕೊಂಡಿದ್ದು, ಇದನ್ನು ತಡೆಯಲೆಂದೇ ಬಾಂಗ್ಲಾ ಸರ್ಕಾರ ಅವರನ್ನು ಗೃಹಬಂಧನದಲ್ಲಿಟ್ಟಿದೆ. ಕಳೆದ ಬುಧವಾರದಂದೇ ಜಿಯಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು' ಎಂದು ಜಿಯಾ ಅವರ ಅಂತಾರಾಷ್ಟ್ರೀಯ ವ್ಯವಹಾರಗಳ ಸಲಹೆಗಾರ ಶಮ್ಷೇರ್ ಮೊಬಿನ್ ಚೌದರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


