ಮಂತ್ರ ದಂಡವಿಲ್ಲ, ಪ್ರಯತ್ನಿಸಿದರೆ ಯಾವುದು ಅಸಾಧ್ಯವಲ್ಲ: ಕೇಜ್ರಿವಾಲ್

ನವದೆಹಲಿ: ದೆಹಲಿಯ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ತಮ್ಮ ಬಳಿ ಯಾವುದೇ ಮಂತ್ರ ದಂಡವಿಲ್ಲ. ಆದರೆ ಪ್ರಮಾಣಿಕವಾಗಿ ಪ್ರಯತ್ನಿಸಿದರೆ ಯಾವುದು ಅಸಾಧ್ಯವಲ್ಲ ಎಂದು ದಹೆಲಿ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಚುನಾವಣಾ ಪೂರ್ವದಲ್ಲಿ ಎಎಪಿ ಪಕ್ಷ ಜನರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ಬಿಜೆಪಿಯ ಹೇಳಿಕೆಗಳ ಹಿನ್ನಲೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ಪ್ರಮಾಣಿಕವಾಗಿ ಪ್ರಯತ್ನಿಸಿದರೆ ಎಂತಹ ಸಮಸ್ಯೆಗಳನ್ನಾದರೂ ಪರಿಹರಿಸಬಹುದಾಗಿದೆ. ಆದರೆ ಇದಕ್ಕೆ ಜನರ ಸಹಕಾರ ಅಗತ್ಯ ಎಂದು ಹೇಳಿದರು.
'ದೆಹಲಿ ಜನತೆಯಲ್ಲಿ ನಾನು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಎಸ್‌ಎಂಎಸ್ ಮೂಲಕ ಮತ್ತು ಈ-ಮೇಲ್ ಮೂಲಕ ತಮ್ಮ ತಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಿ. ದೆಹಲಿಯ ಎಲ್ಲ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ನಾನು ಯಾವುದೇ ಮಂತ್ರಶಕ್ತಿ ಅಥವಾ ಮಂತ್ರದಂಡವನ್ನು ಹೊಂದಿಲ್ಲ. ಆದರೆ ಪ್ರಾಮಾಣಿಕ ಜನರು ನಮ್ಮೊಂದಿಗೆ ಕೈ ಜೋಡಿಸಿದರೆ ಯಾವುದೂ ಅಸಾಧ್ಯವಲ್ಲ. ಇದಕ್ಕಾಗಿ ಪ್ರಮಾಣಿಕ ವ್ಯಕ್ತಿಗಳನ್ನೇ ನಾವು ಆಯ್ಕೆ ಮಾಡುತ್ತೇವೆ. ಅವರ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುತ್ತೇವೆ. ಪ್ರಾಮಾಣಿಕ ಜನರು ನಮ್ಮೊಂದಿಗೆ ಕೈಜೋಡಿಸಿದರೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸಹಕಾರವಾಗುತ್ತದೆ ಎಂದು ಕೇಜ್ರಿವಾಲ್ ತಿಳಿಸಿದರು.
ಪ್ರಮಾಣಿಕ ವ್ಯಕ್ತಿಗಳ ಹುಡುಕಾಟಕ್ಕಾಗಿ ತೆಗೆದುಕೊಂಡಿರುವ ಕ್ರಮಗಳು ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಜ್ರಿವಾಲ್, ಖಂಡಿತಾ ನಾವು ಇದಕ್ಕಾಗಿ ಒಂದು ತಂಡವನ್ನೇ ರಚಿಸಿದ್ದೇವೆ. ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿರುವ ರಾಜೇಂದ್ರ ಕುಮಾರ್ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ನೇತೃತ್ವದಲ್ಲಿ ಆಯ್ಕೆ ನಡೆಯುತ್ತದೆ ಎಂದು ಹೇಳಿದರು.
ಇದೇ ವೇಳೆ ತಾವು ಜನತೆಗೆ ನೀಡಿರುವ ಆಶ್ವಾಸನೆಗಳ ಈಡೇರಿಕೆಗಾಗಿಯೂ ತಾವು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಪ್ರಸ್ತುತ ನಾವು ದೆಹಲಿಗೆ 24 ಗಂಟೆಗಳ ನಿರಂತರ ವಿದ್ಯುತ್ ಮತ್ತು ಪ್ರತಿ ನಾಗರೀಕನಿಗೂ ಪ್ರತಿನಿತ್ಯ 700 ಲೀಟರ್ ನೀರು ಸರಬರಾಜು ಮಾಡುವ ಕುರಿತು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದರು.
ಅಂತೆಯೇ ಇದೇ ಶನಿವಾರ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕುರಿತು ಮಾತನಾಡಿದ ಕೇಜ್ರಿವಾಲ್ ಅವರು, ಸಮಾರಂಭಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತೇವೆ. ಆದರೆ ಎಲ್ಲರೂ ಸಮಾನರೇ. ಯಾವುದೇ ವಿಐಪಿ ವ್ಯಕ್ತಿಗಳಿರುವುದಿಲ್ಲ. ಎಲ್ಲರಿಗೂ ಸಮಾರಂಭಕ್ಕೆ ಸ್ವಾಗತಕೋರುತ್ತೇವೆ ಎಂದು ಅವರು ಹೇಳಿದರು.
ಇದೇ ಡಿಸೆಂಬರ್ 28 ಶನಿವಾರದಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಕೇಜ್ರಿವಾಲ್ ಅವರೊಂದಿಗೆ ಎಎಪಿಯ 6 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


