ಈಗಿನ ಸುದ್ದಿ

ರಬ್ಬರ್ ಕಾರ್ಖಾನೆಗೆ ಬೆಂಕಿ: ನಾಲ್ವರು ಸಜೀವ ದಹನ

ರಬ್ಬರ್ ಕಾರ್ಖಾನೆಗೆ ಬೆಂಕಿ: ನಾಲ್ವರು ಸಜೀವ ದಹನ
Published On :

ಆಂಧ್ರಪ್ರದೇಶ: ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆಯ ಗಗನ್ ಪಹಾಡ್ ಪ್ರದೇಶದಲ್ಲಿನ ರಬ್ಬರ್ ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಗಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ.

ಗಗನ್ ಪಹಾಡ್ ಪ್ರದೇಶದಲ್ಲಿರುವ ಅಕ್ಷಿತಾ ರಬ್ಬರ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಪೈಕಿ ನಾಲ್ವರು ಸುಟ್ಟು ಕರಕಲಾಗಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರನ್ನು ನಂದ ಕಿಶೋರ್, ಇಶಾನ್, ನವೀನ್ ಹಾಗೂ ಗೋವಿಂದ ಚೌಧರಿ ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ಬಿಹಾರದ ಮೂಲದವರು ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ಕೂಡಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಥಮ ಮಾಹಿತಿ ಪ್ರಕಾರ, ಕಾರ್ಖಾನೆಯಲ್ಲಿ ಅಳವಡಿಸಿದ್ದ ಬಾಯ್ಲರ್ ಪೈಪ್‌ನಲ್ಲಿ ಲಿಕೇಜ್ ಸಂಭವಿಸಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ.

ಕಾರ್ಖಾನೆಯಲ್ಲಿ ಯಾವುದೇ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಹೀಗಾಗಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಕಾರ್ಖಾನೆಯ ಮಾಲೀಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.