ಈಗಿನ ಸುದ್ದಿ

ಆದರ್ಶ ಹಗರಣದ ವರದಿ ತಿರಸ್ಕರಿಸುವ 'ಮಹಾ' ನಿರ್ಧಾರ ಒಪ್ಪಿಕೊಳ್ಳಲ್ಲ: ರಾಹುಲ್

Published On :

ನವದೆಹಲಿ: ಆದರ್ಶ ಹಗರಣದ ತನಿಖಾ ವರದಿಯನ್ನು ತಿರಸ್ಕರಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ತಾವು ಒಪ್ಪಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ನಾನು ಒಪ್ಪಿಕೊಳ್ಳುವುದಿಲ್ಲ. ವರದಿಯನ್ನು ಪುನರ್ ಪರಿಗಣಿಸಬೇಕು ಎಂದು ಸೂಚಿಸಿದ್ದಾರೆ.

ಹಗರಣದಲ್ಲಿ ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರು ಭಾಗಿಯಾಗಿದ್ದು, ಅವರನ್ನು ರಕ್ಷಿಸಲಾಗುತ್ತಿದೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಎಲ್ಲ ರಾಜಕೀಯ ಪಕ್ಷಗಳು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿವೆ. ಆದರೆ ಯಾರೂ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಬರೀ ಮಾತನಾಡುತ್ತಾರೆ. ಕೆಲಸ ಮಾಡಲ್ಲ ಎಂದರು.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು, ಕಾಂಗ್ರೆಸ್ ಆಡಳಿತವಿರುವ ಎಲ್ಲ ರಾಜ್ಯಗಳು ಮುಂದಿನ ವರ್ಷ ಫೆಬ್ರುವರಿ 28ರೊಳಗೆ ಹೊಸ ಲೋಕಾಯುಕ್ತ ಕಾಯ್ದೆಯನ್ನು ಜಾರಿಗೊಳಿಸಬೇಕು. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಕೇನ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.