ಆಮ್ ಆದ್ಮಿ ಸಚಿವರಿಗೆ ಖಾತೆ ಹಂಚಿಕೆ
ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊದಲ ಸಂಪುಟ ಸಭೆ ನಡೆಸಿದ್ದು, ಸಭೆ ಬಳಿಕ ತಮ್ಮೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಆರು ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.
ಮನೀಶ್ ಸಿಸೋಡಿಯಾ ಅವರಿಗೆ ಶಿಕ್ಷಣ, ಲೋಕೋಪಯೋಗಿ, ನಗರಾಭಿವೃದ್ದಿ ಮತ್ತು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ನೀಡಲಾಗಿದೆ. ಸೋಮನಾಥ್ ಭಾರತಿ ಅವರಿಗೆ ಕಾನೂನು ಮತ್ತು ಪ್ರವಾಸೋಧ್ಯಮ ಖಾತೆ, ಸೌರಭ್ ಭಾರದ್ವಾಜ್ ಅವರಿಗೆ ಆಹಾರ ಮತ್ತು ಸರಬರಾಜು, ಸಾರಿಗೆ ಖಾತೆ, ಗಿರೀಶ್ ಸೋನಿ ಅವರಿಗೆ ಎಸ್ಸಿ ಮತ್ತು ಎಸ್ಟಿ, ಕಾರ್ಮಿಕ ಮತ್ತು ಅಭಿವೃದ್ಧಿ ಇಲಾಖೆ, ರಾಖಿ ಬಿರ್ಲಾ ಅವರಿಗೆ ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸತ್ಯೇಂದ್ರ ಜೈನ್ ಅವರಿಗೆ ಆರೋಗ್ಯ ಮತ್ತು ಕೈಗಾರಿಕಾಭಿವೃದ್ಧಿ ಇಲಾಖೆ ಜವಾಬ್ದಾರಿ ವಹಿಸಲಾಗಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರು ಇಂಧನ ಮತ್ತು ಹಣಕಾಸು ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದು, ಹೆಚ್ಚುವರಿಯಾಗಿ ಗೃಹ ಖಾತೆ ಮತ್ತು ವಿಚಕ್ಷಣಾ ಮತ್ತು ಸೇವೆಗಳ ಖಾತೆಯನ್ನು ತಾವೇ ನಿಭಾಯಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

