ನಿಮ್ಮ ಸೇವಕನಾಗಿ ಪ್ರಮಾಣ ಸ್ವೀಕರಿಸಿದ್ದೇನೆ: ಕೇಜ್ರಿವಾಲ್

ನವದೆಹಲಿ: ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿಲ್ಲ. ನಿಮ್ಮ ಸೇವಕನಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದು ದೆಹಲಿ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಇಂದು ದೆಹಲಿಯ 7ನೇ ಮುಖ್ಯಮಂತ್ರಿಯಾಗಿ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ ಕೇಜ್ರಿವಾಲ್, ಇದೊಂದು ಐತಿಹಾಸಿಕ ದಿನ. ನಮ್ಮನ್ನು ಗೆಲ್ಲಿಸಿದ ಎಲ್ಲರಿಗೂ ಧನ್ಯವಾದ. ಇದು ನನ್ನ ಜಯ ಅಲ್ಲ. ಸಾಮಾನ್ಯ ಜನತೆಗೆ ಸಿಕ್ಕ ಜಯ ಎಂದು ಹೇಳಿದರು.
ಇಂದು ನಾನೊಬ್ಬನೆ ಅಧಿಕಾರ ಸ್ವೀಕರಿಸಿಲ್ಲ. ದೆಹಲಿಯ ಎಲ್ಲ ಜನತೆಯೂ ಅಧಿಕಾರ ಸ್ವೀಕರಿಸಿದ್ದಾರೆ. ಎಲ್ಲರೂ ಸೇರಿ ದೆಹಲಿಯನ್ನು ಅಭಿವೃದ್ಧಿ ಮಾಡೋಣ ಎಂದು ಕೇಜ್ರಿವಾಲ್ ಕರೆ ನೀಡಿದರು.
ಯಾವುದೇ ಜಾತಿ, ಮತ, ಭೇದವಿಲ್ಲದೆ ನಾವು ಜನತೆಯ ಸೇವೆ ಮಾಡುತ್ತೇವೆ. ಹಿಂದು, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಂದೇ ಎಂಬುದನ್ನು ತೋರಿಸುವ ಮೂಲಕ ದೆಹಲಿಯಲ್ಲಿ ಹೊಸತನ್ನು ತರುತ್ತೇವೆ ಎಂದು ಕೇಜ್ರಿವಾಲ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


