ಇದು ಕೆಜೆಪಿಯ ಕೊನೆಯ ಸಭೆ, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ: ಬಿಎಸ್ವೈ

ಶಿವಮೊಗ್ಗ: ತಾವು ಬಿಜೆಪಿಗೆ ಮರಳುವುದನ್ನು ಖಚಿತಪಡಿಸಿರುವ ಮಾಜಿ ಮುಖ್ಯಮಂತ್ರಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವುದಾಗಿ ಭಾನುವಾರ ಹೇಳಿದ್ದಾರೆ.
ಇಂದು ಶಿಕಾರಿಪುರದ ತಮ್ಮ ನಿವಾಸದಲ್ಲಿ ನಡೆದ ಕೆಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿಎಸ್ವೈ ಬಿಜೆಪಿ ಸೇರ್ಪಡೆ ಖಚಿತಪಡಿಸಿದ್ದಾರೆ. ಇನ್ನು 2-3ದಿನದಲ್ಲಿ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ಅಂತಿಮಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಇದು ಕೆಜೆಪಿಯ ಕೊನೆಯ ಸಭೆ ಎಂದು ಸಹ ಕೆಜೆಪಿ ಕಾರ್ಯಕರ್ತರಿಗೆ ಮಾಜಿ ಸಿಎಂ ತಿಳಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ನಾನು ಮತ್ತೆ ಬಿಜೆಪಿ ಸೇರುತ್ತಿದ್ದೇನೆ. ಹೀಗಾಗಿ ಎಲ್ಲರೂ ತಮಗೆ ಸಹಕರಿಸಬೇಕು ಎಂದು ಸಭೆಯಲ್ಲಿ ಬಿಎಸ್ವೈ ಮನವಿ ಮಾಡಿದರು.
ಬಿಜೆಪಿ ಸೇರ್ಪಡೆಯಾದ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲವು ವಿಶ್ವಾಸ ವ್ಯಕ್ತಪಡಿಸಿದರು.
ಹೊಸ ವರ್ಷದ ಆರಂಭದಲ್ಲಿ ಯಡಿಯೂರಪ್ಪ ಅವರಿಗೆ ಬಿಜೆಪಿ ಸೇರುವಂತೆ ರಾಜ್ಯ ಬಿಜೆಪಿ ಅಧಿಕೃತ ಆಹ್ವಾನ ನೀಡಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಸೂಚನೆಯಂತೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆನಂತಕುಮಾರ್ ಸೇರಿದಂತೆ ಹಲವು ನಾಯಕರು ಜ.2ರಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ವಾಪಸಾಗುವಂತೆ ಅಧಿಕೃತವಾಗಿ ಆಹ್ವಾನಿಸಲಿದ್ದಾರೆ.
ಈ ಆಹ್ವಾನವನ್ನು ಮನ್ನಿಸಿ ಸಂಕ್ರಾಂತಿ ಮುಗಿದ ಬಳಿಕ ಯಡಿಯೂರಪ್ಪ ಅವರು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಬಿಜೆಪಿಗೆ ವಾಪಸಾಗಲಿದ್ದಾರೆ. ಸಮಾವೇಶಕ್ಕೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಸಾಕ್ಷಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


