ಸಮಸ್ಯೆ ಪರಿಹಾರಕ್ಕೆ 10 ದಿನ ಟೈಮ್ ಕೊಡಿ ಸಾಕು: ಕೇಜ್ರಿವಾಲ್

ನವದೆಹಲಿ: ನಿಮ್ಮ ಸಮಸ್ಯೆ ಪರಿಹಾರಕ್ಕೆ ನನಗೆ 10 ದಿನ ಕಾಲಾವಕಾಶ ಕೊಡಿ ಸಾಕು, ಇಡೀ ವ್ಯವಸ್ಥೆಯನ್ನು ಸರಿಪಡಿಸಿ, ದೆಹಲಿ ಜನತೆಯ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ದೆಹಲಿ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಭರವಸೆ ನೀಡಿದ್ದಾರೆ.
ಸುಳ್ಳು ಭರವಸೆಗಳನ್ನು ನೀಡಲು ನನಗೆ ಇಷ್ಟವಿಲ್ಲ. ಹಾಳಾಗಿ ಹೋಗಿರುವ ವ್ಯವಸ್ಥೆಯನ್ನು ಸರಿಪಡಿಸಿದ ನಂತರವೇ ನಾನು ಜನರ ಅಹವಾಲುಗಳನ್ನು ಸ್ವೀಕರಿಸುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೆ ದಿನವೇ ಹಲವು ಸಮಸ್ಯೆಗಳನ್ನು ಹೊತ್ತು ಅವರ ನಿವಾಸಕ್ಕೆ ಸಾವಿರಾರು ಜನ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಕೇಜ್ರಿವಾಲ್, ಇಡೀ ವ್ಯವಸ್ಥೆಯನ್ನು ಸರಿಪಡಿಸಬೇಕಾದ ಅಗತ್ಯ ಇದೆ. ಇದಕ್ಕೆ ಜನತೆಯ ಬೆಂಬಲವೂ ಬೇಕು ಎಂದು ಹೇಳಿದರು.
ನಾವು ಈಗತಾನೇ ಅಧಿಕಾರ ವಹಿಸಿಕೊಂಡಿದ್ದೇವೆ. ವ್ಯವಸ್ಥೆಯನ್ನು ಸರಿಪಡಿಸಿ, ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಕನಿಷ್ಟ ಏಳರಿಂದ ಹತ್ತು ದಿನ ಕಾಲಾವಕಾಶ ಬೇಕು ಎಂದು ಕೇಜ್ರಿವಾಲ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


