ಈಗಿನ ಸುದ್ದಿ

ರಷ್ಯಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 18 ಸಾವು

Published On :

ಮಾಸ್ಕೋ: ರಷ್ಯಾದ ವೊಲ್ಗೊಗ್ರಾಡ್ ರೇಲ್ವೆ ನಿಲ್ದಾಣದಲ್ಲಿ ಭಾನುವಾರ ಆತ್ಮಹುತಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 18 ಮಂದಿ ಮೃತಪಟಿದ್ದಾರೆ ಮತ್ತು 40ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟಕಗಳನ್ನು ಹೊಂದಿದ್ದ ಮಹಿಳೆಯೊಬ್ಬಳು ವೊಲ್ಗೊಗ್ರಾಡ್ ರೇಲ್ವೆ ನಿಲ್ದಾಣದ ಮುಖ್ಯ ಪ್ರವೇಶ ದ್ವಾರದಲ್ಲಿದ್ದ ಮೆಟಲ್ ಗೇಟ್ ಬಳಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾಳೆ. ಸ್ಫೋಟದ ದೃಶ್ಯ ನಿಲ್ದಾಣದ ಸಿಸಿಟಿಗಳಲ್ಲಿ ಸೇರೆಯಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಘಟನೆಯ ನಂತರ ರಷ್ಯಾದ್ಯಾಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಘಟನಾ ಸ್ಥಳದಲ್ಲೂ ಸೂಕ್ತ ಭದ್ರತೆ ಒದಗಿಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಆದೇಶಿಸಿರುವುದಾಗಿ ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.