ಈಗಿನ ಸುದ್ದಿ

ಬೇಷರತ್ ಬಿಜೆಪಿ ಸೇರುತ್ತಿದ್ದೇನೆ: ಬಿಎಸ್‌ವೈ

ಬೇಷರತ್ ಬಿಜೆಪಿ ಸೇರುತ್ತಿದ್ದೇನೆ: ಬಿಎಸ್‌ವೈ
Published On :

ಶಿವಮೊಗ್ಗ: ಯಾವುದೇ ಷರತ್ತು ವಿಧಿಸದೇ ಬೇಷರತ್ ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಕೆಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ, ಸೊರಬದಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಬಿಜೆಪಿಗೆ ವಾಪಸ್ಸಾಗುವ ನಿರ್ಧಾರ ತೆಗೆದುಕೊಂಡಿದ್ದೇನೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಯಾವುದೇ ಷರತ್ತಿಲ್ಲದೆ ಮಾತೃ ಪಕ್ಷಕ್ಕೆ ಮರಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಯಾವುದೇ ಸ್ಥಾನಮಾನದ ಆಕಾಂಕ್ಷೆಯಿಂದ ಬಿಜೆಪಿ ಸೇರುತ್ತಿಲ್ಲ. ಪಕ್ಷವನ್ನು ಬಲಪಡಿಸಲು ಬಿಜೆಪಿ ಸೇರುತ್ತಿದ್ದೇನೆ. ಹೀಗಾಗಿ ತಕ್ಷಣವೇ ನನಗೆ ಯಾವುದೇ ಸ್ಥಾನಮಾನ ಬೇಡ. ಸಕ್ರಿಯ ಬಿಜೆಪಿ ನಾಯಕನಾದ ನಂತರ ಸ್ಥಾನ ಮಾನ ನೀಡಲಿ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಯೋಗ ಗುರು ಬಾಬಾ ರಾಮ್‌ದೇವ್ ಸೇರಿದಂತೆ ಹಲವು ಮಠಾಧೀಶರು ಬಿಜೆಪಿ ಸೇರುವಂತೆ ತಮಗೆ ಸಲಹೆ ನೀಡಿದ್ದರು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಕೆಜೆಪಿ ವಿಲೀನ
ನಿನ್ನೆಯಷ್ಟೆ ಇದು ಕೆಜೆಪಿಯ ಕೊನೆಯ ಸಭೆ ಎಂದು ಹೇಳಿದ್ದ ಯಡಿಯೂರಪ್ಪ ಇಂದು, ಬಿಜೆಪಿಯೊಂದಿಗೆ ತಮ್ಮ ಪಕ್ಷವನ್ನು ವಿಲೀನಗೊಳಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.