ರಷ್ಯಾದಲ್ಲಿ ಮತ್ತೊಂದು ಸ್ಫೋಟ, 10 ಸಾವು
ಮಾಸ್ಕೋ: ರಷ್ಯಾದಲ್ಲಿ ವೋಲ್ಗೋಗ್ರಾಡ್ನಲ್ಲಿ ಮತ್ತೊಂದು ಆತ್ಮಾಹುತಿ ದಾಳಿ ನಡೆದಿದ್ದು, ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸುಮಾರು 10 ಮಂದಿ ಮೃತಪಟ್ಟಿದ್ದಾರೆ.
ರಷ್ಯಾದ ವೋಲ್ಗೋಗ್ರಾಡ್ನ ನಗರದ ಸಂಚಾರಿ ಬಸ್ನಲ್ಲಿ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ 10 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ನಗರದ ಸಂಚಾರಿ ಬಸ್ನಲ್ಲಿ ನಡೆದ ಬಾಂಬ್ ಸ್ಫೋಟ ನೋಡಿದರೆ, ನಿನ್ನೆ ನಡೆದ ಆತ್ಮಾಹುತಿ ದಾಳಿಯಂತೆ ಇದೆ. ಇದು ಸಹ ಉಗ್ರರ ಕೃತ್ಯವಾಗಿದೆ ಎಂದು ರಷ್ಯಾದ ರಾಷ್ಟ್ರೀಯ ತನಿಖಾ ದಳ ಸ್ಪಷ್ಟಪಡಿಸಿದೆ.
ಉಗ್ರರು ಹೆಚ್ಚು ಜನದಟ್ಟನೆ ಇರುವ ಪ್ರದೇಶಗಳನ್ನೇ ಗುರಿಯಾಗಿಟ್ಟುಕೊಂಡು ದಾಳಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ರಷ್ಯಾದ ವೋಲ್ಗೋಗ್ರಾಡ್ನ ರೇಲ್ವೆ ನಿಲ್ದಾಣದಲ್ಲಿ ನಿನ್ನೆಯಷ್ಟೇ ಮಹಿಳೆಯೊಬ್ಬಳು ನಡೆಸಿದ ಆತ್ಮಾಹುತಿ ದಾಳಿಗೆ 18 ಮಂದಿ ಬಲಿಯಾಗಿದ್ದರು. ಸುಮಾರು 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ನಗರದ ರೇಲ್ವೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಿದ್ದ ಸಮಯದಲ್ಲಿ ಮೆಟಲ್ ಡಿಟೆಕ್ಟರ್ ಹತ್ತಿರ ಬರುತ್ತಿದ್ದಂತೆಯೇ ಮಹಿಳೆ ಸ್ಫೋಟಿಸಿಕೊಂಡಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

