ಆದರ್ಶ ಹಗರಣದ ವರದಿ ಮರುಪರಿಶೀಲನೆ: ಎನ್ಸಿಪಿ
ಮುಂಬೈ: ಆದರ್ಶ ಸೊಸೈಟಿ ಹಗರಣದ ವರದಿಯನ್ನು ತಿರಸ್ಕರಿಸಿದ್ದ ಮಹಾರಾಷ್ಟ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವರದಿಯನ್ನು ಮರುಪರಿಶೀಲಿಸಲಾಗುವುದು ಎಂದು ಕಾಂಗ್ರೆಸ್ ಮಿತ್ರ ಪಕ್ಷ ರಾಷ್ಟ್ರೀಯತವಾದಿ ಕಾಂಗ್ರೆಸ್ (ಎನ್ಸಿಪಿ) ಸೋಮವಾರ ತಿಳಿಸಿದೆ.
ನ್ಯಾಯಾಂಗ ಸಮಿತಿಯ ವರದಿಯನ್ನು ಮಹಾರಾಷ್ಟ್ರ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಿಂದ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮರುಪರಿಶೀಲನೆ ನಡೆಸಲಾಗುವುದು ಎಂದು ಎನ್ಸಿಪಿ ಸಂಸದ ಮತ್ತು ಹಿರಿಯ ಮುಖಂಡ ತಾರಿಖ್ ಅನ್ವರ್ ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಸ್ಪಷ್ಟವಾಗಿ ವರದಿಯನ್ನು ತರಾತುರಿಯಲ್ಲಿ ತಿರಸ್ಕರಿಸಿದೆ. ನ್ಯಾಯಾಂಗ ಸಮಿತಿ ಸಲ್ಲಿಸಿದ್ದ ವರದಿಯನ್ನು ತಿರಸ್ಕರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅನ್ವರ್ ತಿಳಿಸಿದ್ದಾರೆ.
ಆದರ್ಶ ಸೊಸೈಟಿ ಹಗರಣದ ಸಂಪೂರ್ಣ ವರದಿಯನ್ನು ನ್ಯಾಯಾಂಗ ಸಮಿತಿ ಸರ್ಕಾರಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ಕಳೆದ ವಾರ ವಿಧಾನಸಭೆಯಲ್ಲಿ ಮಂಡಿಸಿದ್ದ ಮಹಾರಾಷ್ಟ್ರ ಸರ್ಕಾರ ತದನಂತರ ವರದಿಯನ್ನು ತಿರಸ್ಕರಿಸಿತ್ತು. ಹೀಗಾಗಿ ವರದಿಯನ್ನು ಪುನರ್ಪರಿಶೀಲಿಸುವಂತೆ ರಾಹುಲ್ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿಯ ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ವರದಿಯನ್ನು ಮರುಪರಿಶೀಲನೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

