48 ಗಂಟೆಯೊಳಗೆ ಜನರಿಗೆ ಒಳಿತನ್ನು ಮಾಡಲು ಬಯಸುವೆ: ಕೇಜ್ರಿವಾಲ್
ನವದೆಹಲಿ: ವಿಶ್ವಾಸ ಮತಯಾಚನೆ ಮಾಡಲು ಇನ್ನು ಕೇವಲ 3 ದಿನ ಬಾಕಿ ಇರುವುದರಿಂದ ಇನ್ನುಳಿದ 48 ಗಂಟೆಯೊಳಗೆ ಜನರಿಗೆ ಸಾಧ್ಯವಾದಷ್ಟು ಒಳ್ಳೆಯದನ್ನು ಮಾಡಲು ಬಯಸುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ತಿಳಿಸಿದ್ದಾರೆ.
ಬಹುಮತ ಸಾಬೀತು ಪಡಿಸುವ ಅನಿವಾರ್ಯ ಆಮ್ ಆದ್ಮಿ ಪಕ್ಷಕ್ಕೆ ಇರುವುದರಿಂದ ಜನವರಿ 2 ರಂದು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಬೇಕಿದೆ. ಈಗಾಗಲೇ ಬೇಷರತ್ತು ನೀಡಿರುವ ಕಾಂಗ್ರೆಸ್ ನಮ್ಮನ್ನು ಬೆಂಬಲಿಸುತ್ತದೆಯೊ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ಸರ್ಕಾರ ಉಳಿಯಲಿ ಅಥವಾ ಬೀಳಲಿ, ಅಷ್ಟರೊಳಗೆ ಜನರಿಗೆ ಸಾಧ್ಯವಾದಷ್ಟು ಉತ್ತಮ ಕಾರ್ಯಗಳನ್ನು ಮಾಡಬೇಕಿದೆ ಎಂದರು.
ವಿಶ್ವಾಸ ಮತಯಾಚನೆ ವೇಳೆ ಕಾಂಗ್ರೆಸ್ ಅಥವಾ ಬಿಜೆಪಿ ಯಾವ ನಡೆ ಕೈಗೊಳ್ಳಲಿದೆ ಎಂಬುದರ ಬಗ್ಗೆ ನನಗೆ ಚಿಂತೆಯಿಲ್ಲ. ಸರ್ಕಾರವನ್ನು ಉಳಿಸಿಕೊಳ್ಳುವ ಯಾವ ಪ್ರಯತ್ನವನ್ನು ನಾನು ಮಾಡುವುದಿಲ್ಲ. ಆದರೆ ವಿಶ್ವಾಸ ಮತಯಾಚನೆಗೆ ಇನ್ನು 48 ಗಂಟೆಗಳ ಕಾಲವಕಾಶ ಇದೆ. ಇಷ್ಟರೊಳಗೆ ಜನರಿಗೆ ಅನುಕೂಲವಾಗುವಂತ ಕೆಲವೊಂದು ವ್ಯವಸ್ಥೆಗಳನ್ನು ಮಾಡಲು ಬಯಸುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಇದೇ ವೇಳೆ, ಆಮ್ ಆದ್ಮಿ ಪಕ್ಷದ ಶಾಸಕ ಎಂ.ಎಸ್ ಧೀರ್ ಅವರನ್ನು ದೆಹಲಿ ವಿಧಾನಸಭೆಯ ಸ್ಪೀಕರ್ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂದು ಕೇಜ್ರಿವಾಲ್ ಘೋಷಿಸಿದರು.
ಸ್ಪೀಕರ್ ಹುದ್ದೆ ನೇಮಕ ಸಂಬಂಧ ಬಿಜೆಪಿ ಈಗಾಗಲೇ ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ನನಗೆ ಅರಿವಿಲ್ಲ. ಯಾಕೆ ಬಿಜೆಪಿ ಈ ರೀತಿ ನಡೆದುಕೊಂಡಿದೆ. ಬಿಜೆಪಿಯ ಈ ನಡೆ ಬಗ್ಗೆ ನೀವು ಸದ್ಯ ಅವರನ್ನೇ ಕೇಳಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

