ಆಪ್ ಸರ್ಕಾರ ಜನರನ್ನು ಹಾದಿ ತಪ್ಪಿಸುತ್ತಿದೆ: ಕಾಂಗ್ರೆಸ್
ನವದೆಹಲಿ: ದೆಹಲಿ ಜನತೆಗೆ 667 ಲೀಟರ್ ಉಚಿತ ನೀರು ಹಾಗು ವಿದ್ಯುತ್ ದರ ಕಡಿತ ನೀಡುವುದಾಗಿ ಭರವಸೆ ನೀಡಿರುವ ಅರವಿಂದ್ ಕೇಜ್ರಿವಾಲ್ ಸರ್ಕಾರದ ತೀರ್ಮಾನದ ಬಗ್ಗೆ ಕಾಂಗ್ರೆಸ್ ಅಸಮಧಾನ ವ್ಯಕ್ತ ಪಡಿಸಿದೆ. ಆಮ್ ಆದ್ಮಿ ಪಕ್ಷಕ್ಕೆ ಬಾಹ್ಯ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷ ಇದೀಗ ನೂತನ ಸರ್ಕಾರ ಜನರನ್ನು ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿದೆ.
28 ಸೀಟುಗಳನ್ನು ಗೆದ್ದುಕೊಂಡಿರುವ ಆಮ್ ಆದ್ಮಿ ಪಕ್ಷ ಜನವರಿ 3ರಂದು ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಾಗಿದೆ. ಆದರೆ ಇದಕ್ಕಿಂತ ಮುನ್ನವೇ ಕಾಂಗ್ರೆಸ್ ಪಕ್ಷ ಕೇಜ್ರಿವಾಲ್ ನಿಲುವು ಬಗ್ಗೆ ಅಸಮಧಾನ ವ್ಯಕ್ತ ಪಡಿಸಿರುವುದು ಸದ್ಯ ಒಳ್ಳೆಯ ಬೆಳವಣಿಗೆ ಅಲ್ಲ.
ಏತನ್ಮಧ್ಯೆ, ಹೊಸವರುಷದ ಉಡುಗೊರೆಯಾಗಿ ಆಪ್ ಸರ್ಕಾರ 400 ಯುನಿಟ್ ವಿದ್ಯುತ್ ಬಳಕೆದಾರರಿಗೆ ಶೇ.50ರಷ್ಟು ಸಬ್ಸಿಡಿ ನೀಡುವುದಾಗಿ ಘೋಷಿಸಿತ್ತು.
ನೂತನ ಸರ್ಕಾರ ಅಧಿಕಾರಕ್ಕೇರಿದ ದಿನದಿಂದಲೇ ಭರವಸೆಗಳನ್ನು ಈಡೇರಿಸುವುದಕ್ಕೆ ಹೊರಟಿರುವರ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿರುವ ಕಾಂಗ್ರೆಸ್, ಉಚಿತ ನೀರು ನೀಡುವುದಾಗಿ ಹೇಳಿರುವ ಆಪ್ ಸರ್ಕಾರ ಈ ಮೂಲಕ ಜನರ ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿದೆ.
ದೆಹಲಿಯಲ್ಲಿ ಅರ್ಧದಷ್ಟು ಜನರಿಗೆ ನೀರೇ ಸಿಗುತ್ತಿಲ್ಲ. ಅಂಥದರಲ್ಲಿ ಎಲ್ಲ ಮನೆಗಳಿಗೂ ಉಚಿತ ನೀರು ನೀಡುವುದಾಗಿ ಆಪ್ ಸರ್ಕಾರ ಭರವಸೆ ನೀಡಿರುವುದು ಯಾಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಆದಾಗ್ಯೂ, ಜನವರಿ 2ಕ್ಕೆ ವಿಶ್ವಾಸ ಮತ ನಿರ್ಣಯವಾಗಲಿದ್ದು, ಆಪ್ ಸರ್ಕಾರ 48 ಗಂಟೆಗಳಲ್ಲಿ ಜನರಿಗೆ ಸಾಧ್ಯವಾದಷ್ಟು ಸಹಾಯವನ್ನು ಮಾಡಲು ಇಚ್ಛಿಸಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

