ಈಗಿನ ಸುದ್ದಿ

ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರತಿಭಟನೆ ನಡುವೆ ಘರ್ಷಣೆ

Published On :

ಕೊಲ್ಕತ್ತಾ: ಅಕ್ಟೋಬರ್ 26ಕ್ಕೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ 16ರ ಹರೆಯದ ಬಾಲಕಿಯ ಅಂತ್ಯಸಂಸ್ಕಾರ ಮಾಡುವ ವಿಚಾರದಲ್ಲಿ ಎಡರಂಗದ ಕಾರ್ಯಕರ್ತರು ಮತ್ತು ಕೊಲ್ಕತ್ತಾ ಪೊಲೀಸರ ನಡುವೆ ಬುಧವಾರ ಜಟಾಪಟಿ ನಡೆದಿದೆ.

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಲಕಿ ಡಿಸೆಂಬರ್ 23ರಂದು ಕಿಚ್ಚಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಳು. 2 ತಿಂಗಳುಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಆಕೆ ನಿನ್ನೆ (ಮಂಗಳವಾರ) ಸರ್ಕಾರಿ ಆಸ್ಪತ್ರೆಯಲ್ಲಿ ಅಸುನೀಗಿದ್ದಳು.

ಟ್ಯಾಕ್ಸಿ ಡ್ರೈವರ್ ಆಗಿರುವ ಬಾಲಕಿಯ ಅಪ್ಪ ಸಿಪಿಎಂ ಪಕ್ಷದ ಕಾರ್ಮಿಕ ಸಂಘಟನೆಯಾದ ಸಿಐಟಿಯುನ ಸದಸ್ಯರಾಗಿದ್ದಾರೆ. ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೈದ ತನ್ನ ಮಗಳ ಮೃತದೇಹವನ್ನು ಮೆರವಣಿಗೆ ಮೂಲಕ ಕೊಂಡೊಯ್ದು ಅಂತ್ಯ ಸಂಸ್ಕಾರ ನಡೆಸಬೇಕೆಂದು ಬಯಸಿದ್ದರು.

ಆದರೆ ಪೊಲೀಸರು ಬಾಲಕಿಯ ಮೃತದೇಹವನ್ನು ನಿರ್ಮಲಾ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಎಡರಂಗದ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅದೇ ವೇಳೆ ಕೆಲವು ಪೊಲೀಸರು ಮತ್ತು ಸ್ಥಳೀಯ ಗೂಂಡಾಗಳು ಬಾಲಕಿಯ ಮರಣ ಪತ್ರ ನೀಡುವಂತೆ ಬಾಲಕಿಯ ಅಪ್ಪನಿಗೆ ಪೀಡಿಸಿದ್ದಾರೆ. ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸಲುದ್ದೇಶಿಸಿದ್ದರೂ, ಬಾಲಕಿಯ ಮೃತದೇಹವನ್ನು ಮನೆಗೆ ತರುವಾಗ ಅಪರಾಹ್ನ 2.30 ಗಂಟೆಯಾಗಿದೆ ಎಂದು ಬಾಲಕಿಯ ಕುಟುಂಬ ದೂರಿದೆ.

ಆದರೆ ಇದೆಲ್ಲಾ ಸುಳ್ಳು ಆರೋಪಗಳು. ನಾವ್ಯಾವುದೇ ರೀತಿಯಲ್ಲಿ ಬಾಲಕಿಯ ಕುಟುಂಬಕ್ಕೆ ತಡೆಯೊಡ್ಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇಷ್ಟೆಲ್ಲಾ ಜಟಾಪಟಿ ನಂತರ ಬಾಲಕಿಯ ಮೃತದೇಹವನ್ನು ಮೆರವಣಿಗೆ ಮೂಲಕ ಕೊಂಡೊಯ್ದು ಅಂತ್ಯ ಸಂಸ್ಕಾರ ಮಾಡಲು ಪೊಲೀಸರು ಇದೀಗ ಅನುಮತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.