ಈಗಿನ ಸುದ್ದಿ

ದೆಹಲಿ ಗ್ಯಾಂಗ್‌ರೇಪ್: ಐವರು ಆರೋಪಿಗಳಿಗೆ ಗಲ್ಲು?

Published On :

ನವದೆಹಲಿ: ದೆಹಲಿಯಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಐವರು ಆರೋಪಿಗಳ ವಿರುದ್ಧ ಶನಿವಾರ ಆರೋಪಪಟ್ಟಿ ದಾಖಲಿಸಲಾಗಿದ್ದು, ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವ ಸಾಧ್ಯತೆ ಇದೆ.

ದೆಹಲಿಯ ತ್ವರಿತಗತಿ ನ್ಯಾಯಾಲಯ ಐಪಿಸಿಯ 13 ಸೆಕ್ಸೆನ್‌ಗಳಡಿ ಆರೋಪ ಪಟ್ಟಿ ದಾಖಲಿಸಿಕೊಂಡಿದ್ದು, ಫೆಬ್ರುವರಿ 4ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದೆ.

ಬಸ್ ಚಾಲಕ ರಾಮ್ ಸಿಂಗ್, ಅವನ ತಮ್ಮ ಮುಖೇಶ್, ವಿನಯ್ ಶರ್ಮಾ, ಪವನ್ ಗುಪ್ತಾ ಮತ್ತು ಅಕ್ಷಯ್ ಸಿಂಗ್ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಮುಖ ಆರೋಪಿಗಳು.

ಆರನೇ ಆರೋಪಿ ಬಾಲಪರಾಧಿ ಎಂದು ಪರಿಗಣಿಸಲಾಗಿದ್ದು, ಬಾಲಪರಾಧಿ ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ಡಿಸೆಂಬರ್ 16ರಂದು ಆರು ಜನ ಆರೋಪಿಗಳು ಅತ್ಯಾಚಾರವೆಸಗಿದ್ದರು. ತೀವ್ರವಾಗಿ ಗಾಯಗಳಾಗಿದ್ದ ಯುವತಿ ಡಿಸೆಂಬರ್ 29ರಂದು ಮೃತಪಟ್ಟಿದ್ದರು.

ಆರೋಪಿಗಳ ವಿರುದ್ಧ ಸಾವಿರ ಪುಟಗಳನ್ನೊಳಗೊಂಡ ಜಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ  ಸೇರಿದಂತೆ ಇತರೆ ಪ್ರಕರಣಗಳನ್ನು ದಾಖಲಿಸಿಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.