ಈಗಿನ ಸುದ್ದಿ

ಕರ್ನಾಟಕದ ಬಿಜೆಪಿ ಅಸಮರ್ಥ: ಶುಕ್ಲಾ

Published On :

ನವದೆಹಲಿ: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷಾ(ಬಿಜೆಪಿ) ಅಸಮರ್ಥ ಎಂದು ಕೇಂದ್ರ ಸಚಿವ ರಾಜೀವ್ ಶುಕ್ಲಾ ಭಾನುವಾರ ಹೇಳಿದ್ದಾರೆ.

ಬಿಜೆಪಿ ಕರ್ನಾಟಕದಲ್ಲಿ ಅಸ್ಥಿರತೆ ಹುಟ್ಟು ಹಾಕುತ್ತಿದೆ ಎಂದ ಅವರು, ಇದರಿಂದಾಗಿ ರಾಜ್ಯದ ಆರ್ಥಿಕ ಮಟ್ಟ ಕುಗ್ಗುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಜನ ಪರದಾಡುವಂತಹ ಸ್ಥಿತಿ ಎದುರಾಗಿದೆ ಎಂದು ಶುಕ್ಲಾ ಆಪಾದಿಸಿದ್ದಾರೆ.

ರಾಜಕೀಯ ಜಂಜಾಟದಲ್ಲಿ ಸರ್ಕಾರದ ಕರ್ತವ್ಯಗಳನ್ನು ಬಿಜೆಪಿ ಮರೆತಿದೆ. ಕಳೆದ 3 ವರ್ಷಗಳಿಂದ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಇದನ್ನು ದುರಪಯೋಗ ಮಾಡಿಕೊಂಡು, ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ವಿಫಲವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿ ಶಾಸಕರು 'ಮ್ಯೂಸಿಕಲ್ ಚೇರ್‌' ಆಟವನ್ನು ಆಡುತ್ತಿದ್ದಾರೆ. ಅವರಿಗೆ ಆಟವಾಡುವ ಅಭ್ಯಾಸವಿದೆಯೇ ಹೊರತು, ಜನರ ಸೇವೆ ಮಾಡುವುದಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.