ಈಗಿನ ಸುದ್ದಿ

ಕಲ್ಮಾಡಿ ವಿರುದ್ಧ ಆರೋಪ ಪಟ್ಟಿ ಅಂತಿಮ

ಕಲ್ಮಾಡಿ ವಿರುದ್ಧ ಆರೋಪ ಪಟ್ಟಿ ಅಂತಿಮ
Published On :

ನವದೆಹಲಿ: ಕಾಮನ್‌ವೆಲ್ತ್ ಕ್ರೀಡೆಯ (ಸಿಬ್ಲ್ಯುಜಿ) ಉಚ್ಚಾಟಿತ ಸಂಘಟನಾ ಸಮಿತಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಮತ್ತು ಇತರ 9 ಜನರ ಮೇಲೆ ದೆಹಲಿ ನ್ಯಾಯಾಲಯ ಸೋಮವಾರ ದೋಷಾರೋಪ ಪಟ್ಟಿ ಅಂತಿಮಗೊಳಿಸಿದೆ.

ಸಿಡಬ್ಲ್ಯುಜಿಯಲ್ಲಿ ರು.90 ಕೋಟಿ ವಂಚಿಸಿ ಸರ್ಕಾರದ ಖಜಾನೆಗೆ ನಷ್ಟಮಾಡಿದ್ದಾರೆ ಎಂದು ಆರೋಪಿ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸಿಬಿಐನ ವಿಶೇಷ ನ್ಯಾಯಾಧೀಶ ರವೀಂದ್ರ ಕೌರ್ ಅವರು, ಕಲ್ಮಾಡಿ ಮತ್ತು ಸಂಘಟನಾ ಸಮಿತಿ ಕಾರ್ಯದರ್ಶಿ ಲಲಿತ್ ಬನೋಟ್ ಹಾಗೂ ಇತರ 9 ಜನರ ವಿರುದ್ಧ ಐಪಿಸಿ ಹಾಗೂ ಭ್ರಷ್ಟಾಚಾರ ವಿರೋಧಿ ಕಾಯ್ದೆ ಅಡಿ ದೋಷಾರೋಪ ಪಟ್ಟಿ ದಾಖಲಿಸಿಕೊಂಡಿದ್ದಾರೆ.

ಇದಲ್ಲದೇ ನಕಲಿ ಸಹಿ, ನಕಲಿ ದಾಖಲೆ ಸೃಷ್ಟಿ, ದಾಖಲೆ ನಾಶ, ಸಾರ್ವಜನಿಕ ಆಸ್ತಿ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷೆನ್ 13(1 ಡಿ), 13(2) ಅಡಿಯಲ್ಲಿ ಸಹ ದೋಷಾರೋಪ ಮಾಡಲಾಗಿದೆ.

ಆರೋಪ ಪಟ್ಟಿ ಸಲ್ಲಿಸಿದ ನಂತರ ಫೆ.20ಕ್ಕೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.