ಈಗಿನ ಸುದ್ದಿ

ರಾಜಸ್ಥಾನ ರಾಯಲ್ಸ್ ತಂಡಕ್ಕೆ 100 ಕೋಟಿ ದಂಡ

ರಾಜಸ್ಥಾನ ರಾಯಲ್ಸ್ ತಂಡಕ್ಕೆ 100 ಕೋಟಿ ದಂಡ
Published On :

ನವದೆಹಲಿ, ಮುಂಬೈ: ಕಾನೂನು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಜಾರಿ ನಿರ್ದೇಶನಾಲಯ(ಐಡಿ) ಸೋಮವಾರ 100ಕೋಟಿ ರುಪಾಯಿ ದಂಡ ವಿಧಿಸಿದೆ.

ನಿಯಮ ಉಲ್ಲಂಘನೆ ಸಂಬಂಧ ಜಾರಿ ನಿರ್ದೇಶನಾಲಯ ವಿದೇಶಿ ವಿನಿಮಯ ಹಸ್ತಾಂತರ ಕಾಯ್ದೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆ ಅಡಿ ಮೂರು ವರ್ಷಗಳ ಕಾಲ ತನಿಖೆ ನಡೆಸಿ,ಮೂರು ಪ್ರತ್ಯೇಕ ನೋಟಿಸ್ ಜಾರಿಗೊಳಿಸಿದೆ.

ರಾಜಸ್ಥಾನ ರಾಯಲ್ಸ್‌ನಲ್ಲಿ ಪಾಲು ಹೊಂದಿರುವ ಜೈಪುರ್ ಕ್ರಿಕೆಟ್ ಪ್ರೈವೆಟ್ ಲಿಮಿಟೆಡ್‌ಗೆ ರು.50 ಕೋಟಿ, ಶಿಲ್ಪಾ ಶೆಟ್ಟಿಗೆ ರು.34 ಕೋಟಿ ಹಾಗೂ ಎಂ.ಎಸ್.ಇನ್‌ವೆಸ್ಟ್‌ಮೆಂಟ್ ನಿರ್ದೇಶಕರಿಗೆ ರು.14.5 ಕೋಟಿ ದಂಡದ ನೋಟಿಸ್ ಜಾರಿ ಮಾಡಿದೆ.

ಐಪಿಎಲ್ ತಂಡಗಳ ವಿದೇಶಿ ವಿನಿಮಯ ಹಸ್ತಾಂತರದ ಅವ್ಯವಹಾರಗಳ ಬಗ್ಗೆ ಕಳೆದ ಎರಡು ವರ್ಷಗಳಿಂದ ಜಾರಿ ನಿರ್ದೇಶನಾಲಯ ತನಿಖೆ ನಡೆಸುತಿತ್ತು. ನಿನ್ನೆತಾನೆ ಚೆನೈನಲ್ಲಿ ಐಪಿಎಲ್ 6ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಮುಗಿದಿದ್ದು, ಹರಾಜು ಪ್ರಕ್ರಿಯೆ ಮುಗಿದ ನಂತರ ರಾಜಸ್ಥಾನ ರಾಯಲ್ಸ್ ವಿದೇಶಿ ವಿನಿಮಯ ಹಸ್ತಾಂತರದಲ್ಲಿ ಭಾರಿ ಅವ್ಯವಹಾರ ನಡೆಸಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.