ಈಗಿನ ಸುದ್ದಿ

ಮಣಿರತ್ನಂ ಚಿತ್ರ "ಕಡಲ್‌' ವಿರುದ್ಧ ಕೇಸ್

ಮಣಿರತ್ನಂ ಚಿತ್ರ "ಕಡಲ್‌' ವಿರುದ್ಧ ಕೇಸ್
Published On :

ಚೆನ್ನೈ: ವಿಶ್ವರೂಪಂ ಚಿತ್ರದ ನಂತರ ಇದೀಗ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ನಿರ್ದೇಶನದ ಕಡಲ್ ಚಿತ್ರ ಮತ್ತೊಂದು ವಿವಾದ ಹುಟ್ಟುಹಾಕಿದೆ.

ಬಹುಕೋಟಿ ವೆಚ್ಚದ ಕಮಲ್ ಹಾಸನ್ ನಿರ್ದೇಶನದ ವಿಶ್ವರೂಪಂ ವಿವಾದ ಕೊನೆಗಾಣುತ್ತಿದ್ದಂತೆ, ಮತ್ತೊಂದು ಪ್ರಮುಖ ಚಿತ್ರ ವಿವಾದಕ್ಕೆ ಕಾರಣವಾಗಿದೆ.

ಕಡಲ್ ಚಿತ್ರದಲ್ಲಿ ಕ್ರೈಸ್ತ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿರುವ ಕ್ರೈಸ್ತ ಧರ್ಮದ ಮುಖಂಡರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅಲ್ಲದೆ ಚಿತ್ರದಲ್ಲಿರುವ ವಿವಾದಿತ ದೃಶ್ಯವನ್ನು ತೆಗೆದುಹಾಕಬೇಕೆಂದು ಆಗ್ರಹಿಸುತ್ತಿದ್ದಾರೆ. ಇಲ್ಲವಾದಲ್ಲಿ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಿ, ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಕಡಲ್ ಚಿತ್ರದಲ್ಲಿ ಖ್ಯಾತ ತಮಿಳು ನಟ ಕಾರ್ತಿಕ್ ಅವರ ಮಗ ಗೌತಮ್ ಕಾರ್ತಿಕ್ ಮತ್ತು ಖ್ಯಾತ ನಟಿ ರಾಧಾ ಅವರ ಕಿರಿಯ ಪುತ್ರಿ ತುಳಿಸಿನಾಯರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಖ್ಯಾತ ನಟರಾದ ಅರ್ಜುನ್ ಸರ್ಜಾ, ಅರವಿಂದ್‌ಸ್ವಾಮಿ ಸೇರಿದಂತೆ ಹಲವು ಪುಮುಖ ನಟರು ಅಭಿನಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.