ಬೆಂಗಳೂರು: ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗುವಂತೆ ಬಿಜೆಪಿಯ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ಮುಖ್ಯ ಸಚೇತಕ ಸಿದ್ದು ಸವದಿ ಅವರು ಬುಧವಾರ ಹೇಳಿದ್ದಾರೆ.
ವಿಠಲ್ ಕಟಕದೊಂಡ ಹಾಗೂ ತರೀಕೆರೆ ಶಾಸಕ ಸುರೇಶ್ ಸೇರಿದಂತೆ ಎಲ್ಲ ಬಿಜೆಪಿ ಶಾಸಕರಿಗೂ ವಿಪ್ ಜಾರಿ ಮಾಡಲಾಗಿದ್ದು, ಎಲ್ಲರೂ ಅಧಿವೇಶನದಲ್ಲಿ ಭಾಗವಹಿಸುವ ವಿಶ್ವಾಸವಿದೆ ಎಂದು ಸಿದ್ದು ತಿಳಿಸಿದ್ದಾರೆ.
ವಿಠಲ್ ಕಟಕದೊಂಡ ಹಾಗೂ ಸುರೇಶ್ ಅವರ ರಾಜಿನಾಮೆ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಅವರಿಗೂ ವಿಪ್ ಜಾರಿ ಮಾಡಲಾಗಿದ್ದು, ವಿಪ್ನ ಪ್ರತಿಯನ್ನು ಶಾಸಕರ ಭವನದ ಎಲ್ಲ ಕೊಠಡಿಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.