ಈಗಿನ ಸುದ್ದಿ

ಕಾವೇರಿ ಅಧಿಸೂಚನೆ ವಿಚಾರ: ಸರ್ವಪಕ್ಷ ಸಭೆ ಮುಕ್ತಾಯ

ಕಾವೇರಿ ಅಧಿಸೂಚನೆ ವಿಚಾರ: ಸರ್ವಪಕ್ಷ ಸಭೆ ಮುಕ್ತಾಯ
Published On :

ಬೆಂಗಳೂರು: ಕಾವೇರಿ ಅಧಿಸೂಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಕರೆದಿದ್ದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದೆ.

ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕಾವೇರಿ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರ ಮುಂದಿನ ತೀರ್ಮಾನದ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ ನಾಳೆ ಸುಪ್ರೀಂಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುವುದರಿಂದ ಇಂದು ಸಂಜೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ನೀರಾವರಿ ಸಚಿವ ಬೊಮ್ಮಾಯಿ ಅವರು ದೆಹಲಿಗೆ ತೆರಳಲಿದ್ದಾರೆ. ಕಾವೇರಿ ಅಧಿಸೂಚನೆ ಕುರಿತು ಇಂದು ರಾತ್ರಿಯೇ ರಾಜ್ಯದ ಪರ ವಕೀಲ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.

ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ್ ಬೊಮ್ಮಾಯಿ, ಕಾವೇರಿ ಅಧಿಸೂಚನೆ ವಿಚಾರವಾಗಿ ಇಂದು ನಡೆದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ತ.ನಾಡಿಗೆ ನೀರು ಬಿಡುವ ಕುರಿತು ನಾಳೆ ಸುಪ್ರೀಂ ನೀಡುವ ತೀರ್ಪಿನ ನಂತರ ಮುಂದಿನ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಅಲ್ಲದೆ ಇಂದು ಸಂಜೆ ನಾನು ಮತ್ತು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ತೆರಳಿ, ವಕೀಲ ನಾರಿಮನ್ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಹೇಳಿದರು.

ಕಾವೇರಿ ಅಧಿಸೂಚನೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಹಿರಿಯ ನಾಯಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.