ಬೆಂ.ವಿವಿ ಉಪ ಕುಲಪತಿಗಳಾಗಿ ಪ್ರೋ.ಬಿ.ತಿಮ್ಮೇಗೌಡ ಅಧಿಕಾರ ಸ್ವೀಕಾರ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಉಪ ಕುಲಪತಿಗಳಾಗಿ ಪ್ರೋ.ಬಿ ತಿಮ್ಮೇಗೌಡ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಇತ್ತೀಚೆಗಷ್ಟೇ ಬೆಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾಗಿ ನೇಮಕಗೊಂಡಿದ್ದ ಪ್ರೊ.ಬಿ. ತಿಮ್ಮೇಗೌಡ ಅವರು ಇಂದು ಸಂಜೆ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಹಂಗಾಮಿ ಉಪ ಕುಲಪತಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೋ.ರಂಗಪ್ಪ ಅವರು ತಿಮ್ಮೇಗೌಡ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಬೆಂಗಳೂರು ವಿಶ್ವವಿದ್ಯಾಲಯ ಕೇಂದ್ರ ಕಚೇರಿಯಲ್ಲಿ ಇಂದು ಸಂಜೆ ನಡೆದ ಸರಳ ಸಮಾರಂಭದಲ್ಲಿ ಪ್ರೊ.ರಂಗಪ್ಪ ಅವರು ತಿಮ್ಮೇಗೌಡ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿದ್ದ ಪ್ರೊ.ಬಿ ತಿಮ್ಮೇಗೌಡ ಎಂಎಸ್ಸಿ ಪದವೀದರರಾಗಿದ್ದು, ಶಾರೀರಿಕ ಆಂಗಿಕ ರಸಾಯನ ಶಾಸ್ತ್ರ ವಿಶಯದಲ್ಲಿ ಸಂಶೋಧನೆ ಮಾಡಿದ್ದಾರೆ. 31 ಪಿಹೆಚ್ ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿಯೂ ತಿಮ್ಮೇಗೌಡ ಅವರು ಸೇವೆಸಲ್ಲಿಸಿದ್ದಾರೆ.
ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ ಬಿ.ತಿಮ್ಮೇಗೌಡ ಅವರನ್ನು ಉಪ ಕುಲಪತಿಗಳಾಗಿ ನೇಮಕ ಮಾಡಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ನಿನ್ನೆ ಆದೇಶ ಹೊರಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

