ಅಲ್ಪಸಂಖ್ಯಾತ ವಿವಿಗೆ 'ಕಿಟೆಲ್' ನಾಮಕರಣ ಮಾಡಿ: ಕ್ರೈಸ್ತ ಸಮುದಾಯ
ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿವಾದಿತ ಅಲ್ಪಸಂಖ್ಯಾತ ವಿಶ್ವ ವಿದ್ಯಾಲಯಕ್ಕೆ ಮತ್ತೊಂದು ವಿವಾದ ಹುಟ್ಟಿಕೊಂಡಿದೆ. ಹೌದು ವಿವಾದಿತ ವಿವಿಗೆ ಟಿಪ್ಪು ಹೆಸರು ಬೇಡ ಕಿಟೆಲ್ ಹೆಸರು ಇಡಬೇಕೆಂದು ಕ್ರೈಸ್ತ ಸಮುದಾಯದ ಮುಖಂಡರುಗಳು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಮೂಲಕ ಈ ವಿವಿಗೆ ಮತ್ತೊಂದು ವಿವಾದ ಅಂಟಿಕೊಂಡಂತಾಗಿದೆ.
ಕೇಂದ್ರ ಸರ್ಕಾರ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿವಿಗೆ ಟಿಪ್ಪು ಹೆಸರು ನಾಮಕರಣ ಮಾಡಲು ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ವಿವಿಗೆ ಕಿಟೆಲ್ ವಿವಿ ಎಂದು ನಾಮಕರಣ ಮಾಡಬೇಕು ಎಂದು ಕ್ರೈಸ್ತ ಸಮುದಾಯ ಕೇಂದ್ರಕ್ಕೆ ಒತ್ತಾಯಿಸಿದೆ. ಕಿಟೆಲ್ ಕರ್ನಾಟಕ್ಕೆ ಅಪಾರ ಕೊಡುಗೆ ನೀಡಿದ್ದು, ಅಲ್ಪಸಂಖ್ಯಾತ ವಿವಿ ಸ್ಥಾಪಿಸುವ ಉದ್ದೇಶವಿದ್ದರೆ ಆ ವಿವಿಗೆ ಕಿಟೆಲ್ ವಿವಿ ಎಂದು ನಾಮಕರಣ ಮಾಡಬೇಕು ಎಂದು ಕ್ರೈಸ್ತ ಸಮುದಾಯ ಆಗ್ರಹಿಸಿವೆ.
ಈ ಹಿಂದೆ ಕೇಂದ್ರ ಸಚಿವ ರೆಹಮಾನ್ ಖಾನ್ ಶ್ರೀರಂಗಪಟ್ಟಣದಲ್ಲಿ ಟಿಪ್ಪು ವಿವಿ ಸ್ಥಾಪನೆ ಮಾಡಿಯೇ ಸಿದ್ಧ, ಇದಕ್ಕೆ ರಾಜ್ಯ ಸರ್ಕಾರದ ಬೆಂಬಲ ಕೇಂದ್ರ ಕೇಳಿಲ್ಲ ಎಂದು ಹೇಳಿದ್ದರು.
ಕೇಂದ್ರ ಸಚಿವರ ಹೇಳಿಕೆ ರಾಜ್ಯ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತಲ್ಲದೆ, ಶ್ರೀರಂಗಪಟ್ಟಣದಲ್ಲಿ ವಿವಿ ಸ್ಥಾಪಿಸಲು ಜಾಗ ನೀಡುವುದಿಲ್ಲ ಎಂದು ಹೇಳಿತ್ತು. ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಸೇರಿದಂತೆ ಹಲವು ಸಾಹಿತಿಗಳು ಅಲ್ಪಸಂಖ್ಯಾತ ವಿವಿ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

