ಈಗಿನ ಸುದ್ದಿ

ತ.ನಾಡಿಗೆ 2.44 ಟಿಎಂಸಿ ನೀರು ಬಿಡಿ: ರಾಜ್ಯಕ್ಕೆ ಸುಪ್ರೀಂ ಆದೇಶ

ತ.ನಾಡಿಗೆ 2.44 ಟಿಎಂಸಿ ನೀರು ಬಿಡಿ: ರಾಜ್ಯಕ್ಕೆ ಸುಪ್ರೀಂ ಆದೇಶ
Published On :

ನವದೆಹಲಿ: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನೆಡೆಯಾಗಿದ್ದು, ತಮಿಳುನಾಡಿಗೆ 2.44 ಟಿಎಂಸಿ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ.

ತಮಿಳುನಾಡಿಗೆ ಎರಡು ಟಿಎಂಸಿ ನೀರು ಬಿಡುಗಡೆ ಮಾಡುವ ವಿಚಾರ ಸಂಬಂಧ ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಎಂ.ಲೋಧಾ ನೇತೃತ್ವದ ಸುಪ್ರೀಂ ಪೀಠ ಈ ಆದೇಶ ನೀಡಿದೆ.

ಸುಪ್ರೀಂ ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಭೇಟಿ ನೀಡಿದ್ದ ಜಲ ಆಯೋಗದ ತ್ರಿಸದಸ್ಯ ಸಮಿತಿ ನಿನ್ನೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ವರದಿಯಲ್ಲಿ ತಮಿಳುನಾಡಿಗೆ ಸದ್ಯ 2.44 ಟಿಎಂಸಿ ನೀರಷ್ಟೇ ಸಾಕು ಎಂದು ತಿಳಿಸಿತ್ತು. ಅಲ್ಲದೆ 9 ಟಿಎಂಸಿ ನೀರುಬೇಕೆಂಬ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಬೇಡಿಕೆಯನ್ನು ಅತಿರೇಕದ್ದು ಎಂದು ಸಮಿತಿ ಹೇಳಿತ್ತು. ತಮಿಳುನಾಡಿನಲ್ಲಿ 6 ಲಕ್ಷದ ಬದಲು ಕೇವಲು 1 ಲಕ್ಷ ಎಕರೆ ಪ್ರದೇಶಕಷ್ಟೇ ನೀರಿನ ಅಗತ್ಯ ಇದೆ. ಉಳಿದ 5 ಲಕ್ಷ ಎಕರೆ ಪ್ರದೇಶದಲ್ಲಿ ಶೇ.50ರಷ್ಟು ಸಾಂಬಾ ಬೆಳೆ ಕಟಾವು ಮುಗಿದಿದೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ಜಲ ಆಯೋಗದ ವರದಿಯನ್ನು ಪರಿಶೀಲಿಸಿದ ಬಳಿಕ ಸುಪ್ರೀಂ ಕೋರ್ಟ್, ತಮಿಳುನಾಡಿಗೆ ಅಗತ್ಯವಿರುವ 2.44ಟಿಎಂಸಿ ನೀರು ಬಿಡುವಂತೆ ಸೂಚಿಸಿದೆ.

ಇದೇ ವೇಳೆ 6 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿರುವ ಸಾಂಬಾ ಬೆಳೆ ಹಾಳಾಗುತ್ತಿದೆ. ಹೀಗಾಗಿ ತಕ್ಷಣ ಕರ್ನಾಟಕದಿಂದ 9 ಟಿಎಂಸಿ ಕಾವೇರಿ ನೀರು ಬಿಡಿಸಬೇಕು ಎಂದು ಸುಳ್ಳು ಅಫಡಿವಿಟ್ ಸಲ್ಲಿಸಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ ಮತ್ತೊಮ್ಮೆ ಈ ರೀತಿ ಸುಳ್ಳು ಅಫಿಡವಿಟ್ ಸಲ್ಲಿಸದಂತೆ ತಮಿಳುನಾಡಿಗೆ ಸೂಚಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.