ಅಫ್ಜಲ್ಗೆ ಗಲ್ಲು: ಕಾಶ್ಮೀರದಲ್ಲಿ ನಾಲ್ಕು ದಿನ ಶೋಕಾಚರಣೆ

ಶ್ರೀನಗರ: ಉಗ್ರ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ಖಂಡಿಸಿರುವ ಕಾಶ್ಮೀರದ ಹುರಿಯತ್ ಕಾನ್ಫರೆನ್ಸ್ ನಾಲ್ಕು ದಿನ ಶೋಕಾಚರಣೆ ಘೋಷಿಸಿದೆ.
ನಾಲ್ಕು ದಿನಗಳ ಕಾಲ ಕಾಶ್ಮೀರ ಸಂಪೂರ್ಣ ಬಂದ್ ಆಗಲಿದೆ ಎಂದು ಹುರಿಯತ್ ಕಾನ್ಫರೆನ್ಸ್ನ ಅಮಲ್ಗಮ್ ಸಂಘಟನೆಯ ವಕ್ತಾರ ಶಾಹಿದ್-ಉಲ್-ಇಸ್ಲಾಂ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಅಫ್ಜಲ್ ಗುರುವನ್ನು ಗಲ್ಲಿಗೇರಿಸಿರುವುದರಿಂದ ಇಂದಿನಿಂದ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಶೋಕಾಚರಣೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಮೃತ ಅಫ್ಜಲ್ ಗುರುವಿನ ದೇಹವನ್ನು ಆತನ ಕುಟುಂಬ ಸದಸ್ಯರಿಗೆ ನೀಡಬೇಕು ಮತ್ತು ಇಸ್ಲಾಂ ಧರ್ಮದ ಪ್ರಕಾರವಾಗಿಯೇ ಆತನ ಅಂತ್ಯಕ್ರಿಯೆ ನಡೆಯಬೇಕು ಎಂದು ಹುರಿಯತ್ ಆಗ್ರಹಿಸಿದೆ. ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿಯಾಗಿದ್ದ ಉಗ್ರ ಅಫ್ಜಲ್ ಗುರುವನ್ನು ಇಂದು ಬೆಳ್ಳಿಗ್ಗೆ ಗಲ್ಲಿಗೇರಿಸಲಾಗಿತ್ತು.
ಅತ್ಯಂತ ಗೌಪ್ಯವಾಗಿ ನಡೆದಿದ್ದ ಗಲ್ಲು ಶಿಕ್ಷೆ ಪ್ರಧಾನ ಮಾಹಿತಿಯನ್ನು ಬೆಳ್ಳಿಗ್ಗೆ 8 ಗಂಟೆಗೆ ಮಾಧ್ಯಮಗಳಿಗೆ ನೀಡಲಾಯಿತು. ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಶ್ರೀನಗರ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹುರಿಯತ್ ಕಾನ್ಫರೆನ್ಸ್ನ ಅಯಾಜ್ ಅಕ್ಬದ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕಾಶ್ಮೀರದ ಪ್ರತ್ಯೇಕತಾವಾದಿ ಪ್ರಮುಖ ನಾಯಕರಾದ ಸೈಯ್ಯದ್ ಅಲಿ ಷಾ ಗೀಲಾನಿ, ಮೀರ್ವೈಜ್, ಮಹಮದ್ ಯಾಸಿನ್ ಮಲ್ಲಿಕ್ ಅವರನ್ನು ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಶ್ರೀನಗರದಾದ್ಯಂತ ಕರ್ಫ್ಯೂ ಹೇರಲಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲು ಸೇನೆಗೆ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


