ಈಗಿನ ಸುದ್ದಿ

ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಕೋ.ಚನ್ನಬಸಪ್ಪ

ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಕೋ.ಚನ್ನಬಸಪ್ಪ
Published On :

ಬಿಜಾಪುರ: ಕನ್ನಡ ಶಾಲೆಗಳನ್ನು ಮುಚ್ಚುವ ಬದಲು ಅವುಗಳನ್ನು ಉಳಿಸಿಕೊಳ್ಳುವ ಕೆಲಸವಾಗಬೇಕು ಎಂದು 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ, ಸಾಹಿತಿ ಕೋ. ಚನ್ನಬಸಪ್ಪ ಅವರು ಹೇಳಿದರು.

ಬಿಜಾಪುರದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಕೋ.ಚನ್ನಬಸಪ್ಪ ಅವರು, ಕರ್ನಾಟಕದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ತಪ್ಪು. ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವಾಗಬೇಕು. ಕರ್ನಾಟಕದಲ್ಲಿರುವ ಪ್ರತಿಯೊಬ್ಬ ಕನ್ನಡಿಗನಿಂದಲೂ ಕನ್ನಡ ಉಳಿಸಿಕೊಳ್ಳುವ ಪ್ರಯತ್ನವಾಗಬೇಕು ಎಂದರು.

ಬಿಜಾಪುರದಲ್ಲಿ ಇಂದಿನಿಂದ 3 ದಿನಗಳ ಕಾಲ ನಡೆಯುವ ಸಾಹಿತ್ಯ ಜಾತ್ರೆಗೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಚಾಲನೆ ನೀಡಿದ್ದು, ಜಿಲ್ಲೆಯಾದ್ಯಂತ ಕನ್ನಡ ನುಡಿ ಜಾತ್ರೆಯನ್ನು ಭರ್ಜರಿಯಾಗಿ ಆಚರಿಸಲಾಗುತ್ತಿದೆ. ಸಮ್ಮೇಳನದ ಅಧ್ಯಕ್ಷರಾಗಿರುವ ಕೋ.ಚನ್ನಬಸಪ್ಪ ಅವರನ್ನು ಮೆರವಣಿಗೆ ಮೂಲಕ ಸಮ್ಮೇಳನ ನಡೆಯುತ್ತಿರುವ ಸರ್ಕಾರಿ ಕಲಾ ಕಾಲೇಜು ಆವರಣಕ್ಕೆ ಕರೆತರಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.