ಸಾಹಿತ್ಯ ಸಮ್ಮೇಳನದಲ್ಲಿ ಹಾಲಂಬಿ, ಎಸ್ಪಿ ನಡುವೆ ಜಟಾಪಟಿ
ಬಿಜಾಪುರ: ಬಿಜಾಪುರದಲ್ಲಿ ಶನಿವಾರ ಆರಂಭಗೊಂಡ 79ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಸ್ಥಾಳಾವಕಾಶ ಕಲ್ಪಿಸದೇ ಇರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಡುವೆ ಜಟಾಪಟಿ ನಡೆದಿದೆ.
ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಪುಂಡಲೀಕ ಹಾಲಂಬಿ ಅವರಿಗೆ ಸ್ಥಳಾವಕಾಶ ಕಲ್ಪಿಸಲಾಗಿಲ್ಲ ಎಂದು ಹಾಲಂಬಿ ಬೆಂಬಲಿಗರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.
ನಂತರ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಅಜಯ್ ಹಿಲರಿ, ಹಾಲಂಬಿ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಮುಖ್ಯ ವೇದಿಕೆಯಲ್ಲಿ ತಮಗೆ ಸ್ಥಾಳಾವಕಾಶ ನೀಡದೆ ಇರುವುದರಿಂದ ಹಾಲಂಬಿ ಮತ್ತು ಅಜಯ್ ಕುಮಾರ್ ಅವರ ನಡುವೆ ಕೆಲ ಕಾಲ ಮಾತಿನ ಚಕಮಕಿ ಏರ್ಪಟ್ಟಿತ್ತು. ಈ ಮಾತಿನ ಚಕಮಕಿ ಹಿನ್ನೆಲೆಯಲ್ಲಿ ಮುಖ್ಯ ವೇದಿಕೆ ಮೇಲೆ ಸ್ಪಲ ಸಮಯ ತಳ್ಳಾಟ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

