ಈಗಿನ ಸುದ್ದಿ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ
Published On :

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ 2 ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ 15 ಮಂದಿಯ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಇಂದು ಚೆನ್ನೈನಲ್ಲಿ ಸಭೆ ಸೇರಿದ್ದ ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆ ಮಂಡಳಿ 15 ಮಂದಿಯ ಕ್ರಿಕೆಟ್ ಆಟಗಾರರನ್ನು ಆಯ್ಕೆ ಮಾಡಿದೆ. ಆಸ್ಟ್ರೇಲಿಯಾ ವಿರುದ್ಧದ 2 ಟೆಸ್ಟ್ ಪಂದ್ಯಕ್ಕೆ ಧೋನಿ ನೇತೃತ್ವದ 15 ಮಂದಿಯ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ.

ತಂಡದಲ್ಲಿ 2 ಪ್ರಮುಖ ಬದಲಾವಣೆ ಮಾಡಲಾಗಿದ್ದು, ಕಳಪೆ ಫಾರ್ಮ್‌ನಲ್ಲಿರುವ ಗೌತಮ್ ಗಂಭೀರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅಲ್ಲದೆ ಪ್ರಮುಖ ಬ್ಯಾಟ್ಸಮನ್ ಯುವರಾಜ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಕಳಪೆ ಫಾರ್ಮ್‌ನಿಂದಾಗಿ ತಂಡದಿಂದ ಹೊರಗುಳಿದಿದ್ದ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರಿಗೆ ಅವಕಾಶ ನೀಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆ ಮಂಡಳಿ ತಂಡ ಪ್ರಕಟಿಸಿದ ತಂಡ ಇಂತಿದೆ.

1.ಮಹೇಂದ್ರ ಸಿಂಗ್ ಧೋನಿ (ನಾಯಕ)
2.ವೀರೆಂದ್ರ ಸೆಹ್ವಾಗ್
3.ಸಚಿನ್ ತೆಂಡೂಲ್ಕರ್
4.ಚೇತೇಶ್ವರ ಪೂಜಾರ
5. ಶಿಖರ್ ಧವನ್
6. ವಿರಾಟ್ ಕೊಹ್ಲಿ
7.ರವೀಂದ್ರ ಜಡೇಜಾ
8.ಹರ್ಭಜನ್ ಸಿಂಗ್
9.ಆರ್. ಅಶ್ವಿನ್
10.ಪ್ರಗ್ಯಾನ್ ಓಜಾ
11.ಅಜಿಂಕ್ಯಾ ರಹಾನೆ
12.ಭುವನೇಶ್ವರ್ ಕುಮಾರ್
13.ಎಂ.ವಿಜಯ್
14.ಇಶಾಂತ್ ಶರ್ಮಾ
15.ಅಶೋಕ್ ದಿಂಡಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.