ಅಫ್ಜಲ್ಗೆ ಗಲ್ಲು: ಕಾಶ್ಮೀರದಲ್ಲಿ ಮುಂದುವರಿದ ಕರ್ಫ್ಯೂ

ಶ್ರೀನಗರ: ಉಗ್ರ ಅಫ್ಜಲ್ ಗುರುವಿಗೆ ಗಲ್ಲು ಶಿಕ್ಷೆ ಪ್ರಧಾನ ಮಾಡಿದ್ದಕ್ಕಾಗಿ ಪ್ರಕ್ಷುಬ್ದಗೊಂಡಿದ್ದ ಜಮ್ಮು ಮತ್ತು ಕಾಶ್ಮೀರಲ್ಲಿ ಭಾನುವಾರವೂ ಕರ್ಫೂವನ್ನು ಮುಂದುವರೆಸಲಾಗಿದೆ.
ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಲು ಉಗ್ರರೊಂದಿಗೆ ಕೈ ಜೋಡಿಸಿ ಇಡೀ ದೇಶವೇ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದ ಉಗ್ರ ಅಫ್ಜಲ್ ಗುರುವಿನ ಪರವಾಗಿ ಕಾಶ್ಮೀರದಲ್ಲಿ ಕೆಲ ಪ್ರತ್ಯೇಕತಾವಾದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರೊಂದಿಗೆ ಕೆಲ ಉಗ್ರಗಾಮಿ ಸಂಘಟನೆಗಳು ಕೈಜೋಡಿಸಿದ್ದು, ಕಾಶ್ಮೀರದಲ್ಲಿ ಆಶಾಂತಿ ನೆಲೆಸುವಂತೆ ಮಾಡಿದ್ದಾರೆ.
ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ವಿರೋಧಿಸಿ ಕಾಶ್ಮೀರದ ಅಲ್ಲಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾರೂಪ ತಾಳಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡುತ್ತಿದ್ದಾರೆ. ಘಟನೆಯಲ್ಲಿ 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಶ್ಮೀರದಲ್ಲಿ ವಿಧಿಸಿರುವ ಕರ್ಫ್ಯೂವನ್ನು ಮುಂದುವರೆಸುವಂತೆ ಪೊಲೀಸ್ ವರಿಷ್ಠರಿಗೆ ಸೂಚಿಸಿದ್ದಾರೆ.
ಒಟ್ಟಾರೆ ಉಗ್ರ ಅಫ್ಜಲ್ ಗುರುವನ್ನು ಗಲ್ಲಿಗೇರಿಸದ ನಂತರ ಕಾಶ್ಮೀರದಲ್ಲಿ ಹಿಂಸಾಚಾರ ಕಾಣಿಸಿಕೊಂಡಿದೆ. ಕೆಲ ಸಂಘಟನೆಗಳು ಅಫ್ಜಲ್ ಗುರುವಿನ ಗಲ್ಲುಶಿಕ್ಷೆ ವಿಷಯವನ್ನೇ ತಮ್ಮ ಬಂಡವಾಳ ಮಾಡಿಕೊಂಡು ವಿನಾಕಾರಣ ಪ್ರಜೆಗಳಿಗೆ ತೊಂದರೆ ಮಾಡುತ್ತಿದ್ದಾರೆ. ಇಂತಹ ದುಷ್ಟಸಂಘಟನೆಗಳಿಗೆ ಉಗ್ರಗಾಮಿ ಸಂಘಟನೆಗಳ ಬೆಂಬಲವಿರುವುದರಿಂದ ಕಾಶ್ಮೀರದಲ್ಲಿ ಮತ್ತಷ್ಟು ಅಶಾಂತಿ ತಲೆದೋರುವಂತೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


