ಸಾಹಿತ್ಯ ಸಮ್ಮೇಳನದಲ್ಲಿ 2ನೇ ದಿನವೂ ಮುಂದುವರಿದ ಪ್ರತಿಭಟನೆ

ಬಿಜಾಪುರ: ಬಿಜಾಪುರದಲ್ಲಿ ನಡೆಯುತ್ತಿರುವ 79ನೇ ಸಾಹಿತ್ಯ ಸಮ್ಮೇಳನದಲ್ಲಿ 2ನೇ ದಿನವೂ ಸರ್ಕಾರಿ ನೌಕರ ಪ್ರತಿಭಟನೆ ಮುಂದುವರೆದಿದೆ.
ಒಒಡಿ ಚೀಟಿಗಾಗಿ ನಿನ್ನೆ ಪ್ರತಿಭಟನೆ ಆರಂಭಿಸಿದ್ದ ಸರ್ಕಾರಿ ನೌಕರರು ,ಇಂದೂ ಸಹ ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ. ಬಿಜಾಪುರದ ಸೈನಿಕಶಾಲೆಯ ಮೈದಾನದಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಸರ್ಕಾರಿ ನೌಕರರ ಪ್ರತಿಭಟನೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಸಮ್ಮೇಳನದ ಮುಖ್ಯ ವೇದಿಕೆಯ ಬಳಿ ಬಂದು ಪ್ರತಿಭಟನೆ ನಡೆಸಿದ ನೌಕರರು ಒಒಡಿ ಚೀಟಿ ನೀಡುವಂತೆ ಆಗ್ರಹಿಸಿದರು.
ನಿಯಮದ ಪ್ರಕಾರ ಸರ್ಕಾರಿ ನೌಕರರಿಗೆ ಕೊನೆಯ ದಿನ ಒಒಡಿ ಚೀಟಿಗಳನ್ನು ಹಂಚಬೇಕು. ಆದರೆ ಕೆಲ ಕಿಡಿಗೇಡಿ ಹಬ್ಬಿಸಿದ ವದಂತಿಯಿಂದಾಗಿ ಸರ್ಕಾರಿ ನೌಕರರು ಪ್ರತಿಭಟನೆಗಿಳಿದಿದ್ದಾರೆ. ಇಂದಿನ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರೂ ಭಾಗವಹಿಸಿದ್ದು ವಿಶೇಷವಾಗಿತ್ತು.
ಈ ನಡುವೆ ಮುಂಬರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲಿ ನಡೆಸಬೇಕು ಎಂಬುದರ ಕುರಿತು ಇಂದು ರಾತ್ರಿ 8 ಗಂಟೆಗೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ನೇತೃತ್ವದಲ್ಲಿ ಸಭೆ ಸೇರಿ ನಿರ್ಧರಿಸಲಾಗುತ್ತದೆ. ಈಗಾಗಲೇ ಹಾವೇರಿ, ಬಳ್ಳಾರಿ ಮತ್ತು ಮಡಿಕೇರಿ ಜಿಲ್ಲೆಗಳ ಪೈಕಿ ಒಂದು ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಬಲವಾದ ಮಾತುಗಳು ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


