ಅಲಹಾಬಾದ್ ಕಾಲ್ತುಳಿತ: ಸಾವಿನ ಸಂಖ್ಯೆ 36ಕ್ಕೇರಿಕೆ
ಅಲಹಾಬಾದ್: ಇಲ್ಲಿನ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ರಾತ್ರಿ 8.30ರ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 36ಕ್ಕೆ ಏರಿದೆ.
ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಜನ ಇಂದು ಮೃತಪಟ್ಟಿದ್ದಾರೆ ಎಂದು ಅಲಹಾಬಾದ್ ಮುಖ್ಯ ವೈದ್ಯಾಧಿಕಾರಿ ಡಾ. ಪ್ರಭಾಕರ್ ಅವರು ಖಚಿತಪಡಿಸಿದ್ದಾರೆ.
ಗಾಯಗೊಂಡ ಹಲವಾರು ಜನ ಇಲ್ಲಿನ ರೇಲ್ವೆ ಹಾಗೂ ಎಸ್ಆರ್ಎನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಂದು ಮಗು ಸೇರಿದಂತೆ 26 ಜನ ಮಹಿಳೆಯರು ಹಾಗೂ 9 ಜನ ಪುರುಷರು ಮೃತಪಟ್ಟಿದ್ದಾರೆ. ಈ ಪೈಕಿ 20 ಜನರನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕುಂಭಮೇಳದಲ್ಲಿ 3 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಲಹಾಬಾದ್ ರೇಲ್ವೆ ನಿಲ್ದಾಣದಲ್ಲಿ ನಿರೀಕ್ಷೆಗೂ ಮೀರಿ ಪ್ರಯಾಣಿಕರು ಜಮಾಯಿಸಿದ್ದರು. ಪ್ಲಾಟ್ಫಾರಂ 6ರ ಮೇಲ್ಸೇತುವೆ ಭಾಗವೊಂದು ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಉತ್ತರ ಪ್ರದೇಶ ಸರ್ಕಾರ ಈ ಕಾಲ್ತುಳಿತ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

