ಈಗಿನ ಸುದ್ದಿ

ಕುಂಭಮೇಳ ಕಾಲ್ತುಳಿತ: ತಪ್ಪಿತಸ್ಥರ ವಿರುದ್ಧ ಕ್ರಮ; ಅಖಿಲೇಶ್

Published On :

ಅಲಹಾಬಾದ್: ಕುಂಭಮೇಳದ ವೇಳೆ ಅಲಹಾಬಾದ್ ರೇಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ ಏಳು ಲಕ್ಷ ರುಪಾಯಿ ಪರಿಹಾರ ನೀಡಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಮೃತರ ಕುಟುಂಬವನ್ನು ಭೇಟಿ ಮಾಡಿ, ಸಾತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್, ಮೃತಪಟ್ಟವರ ಕುಟುಂಬಕ್ಕೆ ತಲಾ 7 ಲಕ್ಷ ರುಪಾಯಿ ಪರಿಹಾರದ ಚೆಕ್‌ನ್ನು ನೀಡಲಾಗಿದೆ. ಇನ್ನು ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.

ಇದೇ ವೇಳೆ ಪ್ರಕರಣದ ತನಿಖೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅಖಿಲೇಶ್, ಕುಂಭಮೇಳವನ್ನು ಯಾರು ರಾಜಕೀಯಕ್ಕೆ ಬಳಸಬಾರದು ಎಂದರು. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.