ಈಗಿನ ಸುದ್ದಿ

ದೇವೇಗೌಡರನ್ನು ಹಾಡಿ ಹೊಗಳಿದ ಸಿಎಂ ಶೆಟ್ಟರ್

ದೇವೇಗೌಡರನ್ನು ಹಾಡಿ ಹೊಗಳಿದ ಸಿಎಂ ಶೆಟ್ಟರ್
Published On :

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಂಗಳವಾರ ಹಾಡಿ ಹೊಗಳಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಕಾವೇರಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್ ಅವರು, ದೇವೇಗೌಡ ಅವರು ಒಬ್ಬ ಅನುಭವಿ ನಾಯಕರು. ಅವರು ಪ್ರಧಾನಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಿನ್ನೆ ತಮ್ಮನ್ನು ಭೇಟಿ ಮಾಡಿದ ಗೌಡರು, ಕಾವೇರಿ ವಿಚಾರವಾಗಿ ಕೆಲವು ಪ್ರಮುಖ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಈ ವಿಚಾರದಲ್ಲಿ ಅವರು ರಾಜಕೀಯ ಮಾಡಿಲ್ಲ. ನೀರಾವರಿ ಹಾಗೂ ರಸ್ತೆ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರ ಎಂದು ಹೇಳಿದರು.

ರಾಜ್ಯಪಾಲರ ಭಾಷಣವನ್ನು ಸಮರ್ಥಿಸಿಕೊಂಡ ಸಿಎಂ ಶೆಟ್ಟರ್, ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿದೆ. ಕೃಷಿ ಬಜೆಟ್ ಮಂಡನೆ ಸರ್ಕಾರದ ಹೆಮ್ಮೆಯ ವಿಷಯ. ಬಜೆಟ್ ಗಾತ್ರಕ್ಕೆ ತಕ್ಕಂತೆ ನಾವು ಸಾಲ ಮಾಡಿದ್ದೇವೆ, ಸಾಲದಲ್ಲಿ ಸರ್ಕಾರ ಎಂದು ಟೀಕೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.