ಈಗಿನ ಸುದ್ದಿ

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ಅಗತ್ಯವಿಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಹೇಳಿಕೆ

Published On :

ಬೆಂಗಳೂರು: ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಳಾಂತರಗೊಳಿಸುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ಕೋರಿ ವಕೀಲ ಎ.ವಿ ಅಮರನಾಥನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ವೇಳೆ, ಪ್ರತಿಮೆ ಬಳಿಯ ಮೆಟ್ರೋ ಕಾಮಗಾರಿ ಮುಕ್ತಾಯದ ಅಂತದಲ್ಲಿದೆ ಹೀಗಾಗಿ ಪ್ರತಿಮೆ ಸ್ಥಳಾಂತರಿಸುವ ಅಗತ್ಯ ಇಲ್ಲ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು.

ಈ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಬಿಎಂಆರ್‌ಸಿಎಲ್ ಹಾಗೂ ಸರ್ಕಾರಕ್ಕೆ ಸೂಚಿಸಿದ ಕೋರ್ಟ್, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ಮೆಟ್ರೋ ಕಾಮಗಾರಿ ಸಂಬಂಧ ವಿಧಾನಸೌಧದ ಮುಂಭಾಗದಲ್ಲಿರುವ ಜವಾಹರಲಾಲ್ ನೆಹರು ಹಾಗೂ ಸುಭಾಷ್‌ಚಂದ್ರ ಬೋಸ್ ಅವರ ಪ್ರತಿಮೆಯನ್ನು ಸ್ಥಳಾಂತರಿಸಲಾಗಿದೆ. ಆದರೆ, ಅಂಬೇಡ್ಕರ್ ಪ್ರತಿಮೆಯ ಸ್ಥಳಾಂತರಕ್ಕೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದರಿಂದ ಮೆಟ್ರೋ ಕಾಮಗಾರಿ ವಿಳಂಭವಾಗುತ್ತಿದ್ದು, ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ನಷ್ಟ ಉಂಟಾಗುತ್ತಿದೆ ಎಂದು ಆಕ್ಷೇಪಿಸಿ ಅಮರನಾಥ್ ಅವರು ಪಿಐಎಲ್ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.