ಈಗಿನ ಸುದ್ದಿ

'ಮಹಾ' ಗೃಹ ಸಚಿವರಿಗೇ ಎಚ್ಚರಿಕೆ ನೀಡಿದ ರಾಜ್ ಠಾಕ್ರೆ

ಮಹಾರಾಷ್ಟ್ರ ನವ ನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ...

'ಮಹಾ' ಗೃಹ ಸಚಿವರಿಗೇ ಎಚ್ಚರಿಕೆ ನೀಡಿದ ರಾಜ್ ಠಾಕ್ರೆ
Published On :

ಕೊಲ್ಲಾಪುರ: ಮಹಾರಾಷ್ಟ್ರ ನವ ನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್. ಪಾಟೀಲ್ ಅವರಿಗೆ ಬುಧವಾರ ಎಚ್ಚರಿ ನೀಡಿದ್ದಾರೆ. ಈ ಮೂಲಕ ರಾಜ್ ಠಾಕ್ರೆ ಅವರ ಬೆದರಿಕೆಯ ಪ್ರವೃತ್ತಿ ಮುಂದುವರೆದಿದೆ.

ಕೊಲ್ಲಾಪುರದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಜ್ ಠಾಕ್ರೆ, ಪೊಲೀಸರ ಮೂಲಕ ಪಕ್ಷದ ಕಾರ್ಯಕರ್ತರನ್ನು ಸಭೆಯಲ್ಲಿ ಭಾಗವಹಿಸದಂತೆ ಪಾಟೀಲ್ ತಡೆಯುತ್ತಿದ್ದಾರೆ ಮತ್ತು ಅವರು ತಮ್ಮ ಕಾರ್ಯಕರ್ತರ ಕುಟುಂಬಗಳಿಗೆ ಪರೋಕ್ಷವಾಗಿ ತೊಂದರೆ ಕೊಡುತ್ತಿರುವುದನ್ನು ತಾವು ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.

ಎಂಎನ್‌ಎಸ್ ಪಕ್ಷದ ಕಚೇರಿ ಆರಂಭಿಸುವ ತಮ್ಮ ಪಕ್ಷದ ಕಾರ್ಯಕರ್ತರಿಗೆ ಆರ್.ಆರ್.ಪಾಟೀಲ್ ಅವರು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಅವರ ಕುಟುಂಬದ ಸದಸ್ಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಠಾಕ್ರೆ, ಇದು ಹೀಗೆ ಮುಂದುವರೆದರೆ ನಿಮ್ಮ ಪಕ್ಷದ ಕಾರ್ಯಕರ್ತರಿಗೆ ಹಾಗೂ ಅವರ ಕುಟಂಬದ ಸದಸ್ಯರಿಗೆ ತಾವು ಹಾಗೆ ಮಾಡುಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ ಜನತೆಯ ಒಳಿತಿಗಾಗಿ ನಾನು ಮಾತನಾಡುವುದನ್ನು ಮುಂದುವರೆಸುತ್ತೆನೆ. ತಮಗೆ ಯಾವುದೇ ಕೇಸಿನ ಭಯವಿಲ್ಲ ಎಂದು ಠಾಕ್ರೆ ಹೇಳಿದ್ದಾರೆ. ಈಗಾಗಲೇ ರಾಜ್‌ಠಾಕ್ರೆ ಇಂತಹ ಭಾಷಣಗಳನ್ನು ಮಾಡಿದ ಆರೋಪ ಮೇಲೆ ಅವರ ವಿರುದ್ಧ 90ಕ್ಕು ಹೆಚ್ಚು ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.