ನೂತನ ಲೋಕಾಯುಕ್ತರಾಗಿ ನ್ಯಾ.ಭಾಸ್ಕರ್‌ರಾವ್ ಪ್ರಮಾಣ
ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭಾಸ್ಕರ್‌ರಾವ್ ಅವರು ಗುರುವಾರ...

ಬೆಂಗಳೂರು: ರಾಜ್ಯ ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭಾಸ್ಕರ್‌ರಾವ್ ಅವರು ಗುರುವಾರ ರಾಜಭವನದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನ್ಯಾ.ರಾವ್, ದೇವರ ಹೆಸರಿನಲ್ಲಿ ರಾಜ್ಯ ನೂತನ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ನ್ಯಾ. ರಾವ್, ಸರ್ಕಾರ ಲೋಕಾಯುಕ್ತ ತಮ್ಮ ಹೆಸರು ಶಿಫಾರಸ್ಸು ಮಾಡಿದ್ದಕ್ಕೆ ಸಂತಸವಾಗಿದೆ ಎಂದು ಹೇಳಿದರು. ಅಲ್ಲದೇ ತಮ್ಮ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
ಲೋಕಾಯುಕ್ತದಲ್ಲಿ ಹಲವಾರು ಕಡತಗಳು ಬಾಕಿ ಇದ್ದು ಅವುಗಳನ್ನು ಹೇಗೆ ನಿಭಾಯಿಸುವಿರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಲೋಕಾಯುಕ್ತ ರಾವ್, ನನ್ನ ಕಾರ್ಯ ವೈಖರಿಯನ್ನು ಕಾದು ನೋಡಿ. ಬಾಕಿ ಕಡತಗಳ ವಿಲೇವಾರಿಗಳ ಮಾಹಿತಿಯನ್ನು ವೈಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.
ರಾಜ್ಯ ಕಳೆದ 17 ತಿಂಗಳಿಂದ ಲೋಕಾಯುಕ್ತ ಹುದ್ದೆ ಖಾಲಿ ಇದ್ದು, ಸಿಎಂ ಜಗದೀಶ್ ಶೆಟ್ಟರ್ ಶಿಫಾರಸ್ಸು ಹಾಗೂ ಎಲ್ಲ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ನೋಡಿಯೇ ನ್ಯಾ.ರಾವ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಲು ಸೂಚಿಸಿರುವೆ. ಅಲ್ಲದೇ ರಾವ್ ಅವರ ಮೇಲೆ ಯಾವುದೇ ಆರೋಪಗಳು ಇಲ್ಲದಿರುವುದರಿಂದ ಇವರೆ ಲೋಕಾಯುಕ್ತ ಹುದ್ದೆಗೆ ಸೂಕ್ತ ಎಂದು ಅನಿಸಿದ ಹಿನ್ನೆಲೆಯಲ್ಲಿ ನೇಮಕಕ್ಕೆ ಒಪ್ಪಿಗೆ ಸೂಚಿಸಿದ್ದೆನೆ ಎಂದು ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


