ಈಗಿನ ಸುದ್ದಿ

ಕಾಟ್ಜು ನಿಲುವು ಸಮರ್ಥಿಸಿಕೊಂಡ ಕಾಂಗ್ರೆಸ್

Published On :

ನವದೆಹಲಿ: ಪ್ರೆಸ್ ಕೌನ್ಸಿಲ್ ಅಧ್ಯಕ್ಷ ಮಾರ್ಕಂಡೇಯ ಕಾಟ್ಜು ಮೋದಿಯವರ ಬಗ್ಗೆ ಬರೆದ ಲೇಖನ ವಿವಾದಕ್ಕೀಡಾಗಿರುವ ಹಿನ್ನೆಲೆಯಲ್ಲಿ ಕಾಟ್ಜು ಅವರ ನಿಲುವನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.  ಮೋದಿಯವರ ಬಗ್ಗೆ ಬರೆದ ಲೇಖನಕ್ಕೆ ಬಿಜೆಪಿ, ಕಾಟ್ಜು ಅವರನ್ನು ವಿಮರ್ಶೆಗೊಳಪಡಿಸಿದ್ದು, ಕಾಟ್ಜು ರಾಜಿನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಕಾಟ್ಜು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ ಎಂದು ಹೇಳಿದ ಬಿಜೆಪಿ ನಾಯಕ ಅರುಣ್ ಜೇಟ್ಲಿ, ಕಾಟ್ಜು ಅವರು ಬಿಹಾರ್, ಗುಜರಾತ್ ಮತ್ತು  ಪಶ್ಚಿಮ ಬಂಗಾಳದಲ್ಲಿರುವ ಕಾಂಗ್ರೇಸ್ಸೇತರ ಸರ್ಕಾರಗಳನ್ನು ಟೀಕಿಸುವ ಮೂಲಕ ತಮ್ಮ ರಾಜಕೀಯ ಪಕ್ಷಪಾತ ತೋರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಟ್ಜು ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಇತ್ತ ಕಾಂಗ್ರೆಸ್ ಕಾಟ್ಜು ಅವರ ನಿಲುವನ್ನು ಸಮರ್ಥಿಸಿಕೊಂಡಿದೆ.

ಅನೇಕ ವರ್ಷಗಳ ಹಿಂದಿನಿಂದಲೇ ಮೋದಿಯವರನ್ನು ಜನರು ಟೀಕೆ ಮಾಡುತ್ತಿದ್ದಾರೆ. ಇದರರ್ಥ ಅವರೆಲ್ಲರೂ ಕಾಂಗ್ರೆಸ್ ಏಜೆಂಟ್‌ಗಳು ಎಂದಲ್ಲವಲ್ಲಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ನಡುವೆ ಜೇಟ್ಲಿಯವರ ಟೀಕೆಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಕಾಟ್ಜು ಅವರನ್ನು ಟೀಕಿಸುವ ಮೂಲಕ ಬಿಜೆಪಿ ಮೋದಿಯವರನ್ನು ಹೊಗಳುವ ಯತ್ನ ಮಾಡುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.