ಈಗಿನ ಸುದ್ದಿ

ಫೆ.20ಕ್ಕೆ ಸರ್ವಪಕ್ಷ ಸಭೆ ಕರೆದ ಲೋಕಸಭಾ ಸ್ಪೀಕರ್

Published On :

ನವದೆಹಲಿ: ಫೆ.21ಕ್ಕೆ ಸಂಸತ್‌ನಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನ ಸಾಂಗವಾಗಿ ನಡೆಯುವಂತೆ ಮಾಡಲು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಫೆ.20ಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ.

3 ತಿಂಗಳುಗಳ ಅಧಿವೇಶನ ಆರಂಭಕ್ಕೆ ಮುನ್ನ ಸ್ಪೀಕರ್ ಎಲ್ಲ ಪಕ್ಷಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಸಂಸತ್‌ನ ಮೂಲಗಳು ಹೇಳಿವೆ.

ಅಧಿವೇಶನದಲ್ಲಿ ವಿಪಕ್ಷಗಳು ಹೆಲಿಕಾಪ್ಟರ್ ಡೀಲ್ ಬಗ್ಗೆ ಧ್ವನಿಯೆತ್ತಿ ಕಲಾಪಕ್ಕೆ ಭಂಗ ತರುವ ಸಾಧ್ಯತೆ ದಟ್ಟವಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್ ಈಗಾಗಲೇ ಸಚಿವರ ಕಾರ್ಯದರ್ಶಿಯವರನ್ನು ಭೇಟಿ ಮಾಡಿದ್ದು, ಅಧಿವೇಶನ ನಡೆಯಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಆದಾಗ್ಯೂ, ಹೆಲಿಕಾಪ್ಟರ್ ಹಗರಣದ ಬಗ್ಗೆ ಅಧಿವೇಶನದಲ್ಲಿ ದನಿಯೆತ್ತಲು ವಿಪಕ್ಷಗಳು ಸಜ್ಜಾಗಿದ್ದು, ಅಧಿವೇಶನವನ್ನು ಸಾಂಗವಾಗಿ ನಡೆಸಲು ಕೇಂದ್ರ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.