ಈಗಿನ ಸುದ್ದಿ

ಕಾಪ್ಟರ್ ಹಗರಣ: ತನಿಖೆಗೆ ಸಹಕರಿಸುವುದಾಗಿ ಕೆಮರೂನ್ ಭರವಸೆ

Published On :

ನವದೆಹಲಿ: ಬ್ರಿಟನ್‌ನ ಪ್ರಧಾನಿ ಡೇವಿಡ್ ಕೆಮರೂನ್ ಜತೆ ಮಾತುಕತೆ ನಡೆಸಿದ ಪ್ರಧಾನಿ ಮನಮೋಹನ್ ಸಿಂಗ್ ಆಗಸ್ಟಾವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಹಗರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ತಾನು ಬ್ರಿಟನ್ ಪ್ರಧಾನಿ ಜತೆ ಕಾಪ್ಟರ್ ಹಗರಣದ ಬಗ್ಗೆ ಪ್ರಸ್ತಾಪಿಸಿದ್ದು, ಅವರು ತನಿಖೆಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆಂದು ಪ್ರಧಾನಿ ಹೇಳಿದ್ದಾರೆ.

ಭಾರತೀಯ ವಾಯುದಳಕ್ಕೆ ರು.3500 ಕೋಟಿ ರು ಒಪ್ಪಂದ ಪ್ರಕಾರ 12 ವಿವಿಐಪಿ ಹೆಲಿಕಾಪ್ಟರ್‌ಗಳನ್ನು ಪೂರೈಕೆ ಮಾಡುವಲ್ಲಿ ಹಗರಣ ನಡೆದಿದ್ದು, ಇದರ ತನಿಖೆಗೆ ಭಾರತ ಸರ್ಕಾರ ಬ್ರಿಟನ್‌ನ ಸಹಾಯ ಯಾಚಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.

ತಮ್ಮ ಮನವಿಗೆ ಪ್ರತಿಕ್ರಿಯೆ ನೀಡಿದ ಕೆಮರೂನ್, ತಾವು ಈ ಹಗರಣದ ತನಿಖೆಗೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾತುಕತೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.