ನಾಳೆ ಮುಷ್ಕರ: ಶಾಲೆಗಳಿಗೆ ರಜೆ ಇಲ್ಲ, ಬಸ್ ಸಂಚಾರ ಇರುತ್ತೆ
ಬೆಂಗಳೂರು: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ನಾಳಿನ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಸ್.ಆರ್. ಉಮಾಶಂಕರ್ ಅವರು ಮಂಗಳವಾರ ಹೇಳಿದ್ದಾರೆ.
ಮುಷ್ಕರದ ಹಿನ್ನೆಲೆಯಲ್ಲಿ ಫೆಬ್ರವರಿ 20 ಹಾಗೂ 21ರಂದು ಯಾವುದೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿಲ್ಲ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ.
ಇನ್ನು ನಾಳೆಯೂ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಸಾರಿಗೆ ಹಾಗೂ ಗೃಹ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
ಬಂದ್ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಫೆಬ್ರವರಿ 22ಕ್ಕೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ.ತಿಮ್ಮೇಗೌಡ ಅವರು ಹೇಳಿದ್ದಾರೆ.
ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರದ ವೈಫಲ್ಯ ಹಾಗೂ ಕಾರ್ಮಿಕ ಕಾಯ್ದೆಯ ಉಲ್ಲಂಘನೆಗೆ ಸಂಬಂಧಿಸಿ 11 ಕೇಂದ್ರ ಕಾರ್ಮಿಕ ಸಂಘಟನೆಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

