ಬಜೆಟ್ ಅಧಿವೇಶನದಲ್ಲಿ ಶಿಂದೆ ವಿರುದ್ಧ ತರಾಟೆಗೆ ಬಿಜೆಪಿ ಸಜ್ಜು
ನವದೆಹಲಿ: ಬಿಜೆಪಿ ಕೇಸರಿ ಭಯೋತ್ಪಾದನೆ ಮಾಡುತ್ತಿದೆ ಎಂದು ಆರೋಪ ಮಾಡಿದ್ದ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಅವರನ್ನು ಬಜೆಟ್ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ.
ಅದೇ ವೇಳೆ ಹೆಲಿಕಾಪ್ಟರ್ ಹಗರಣದ ಬಗ್ಗೆಯೂ ಬಿಜೆಪಿ ಅಧಿವೇಶನದಲ್ಲಿ ಪ್ರಶ್ನಿಸಲಿದೆ.
ಕೆಲವು ದಿನಗಳ ಹಿಂದೆ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಗಳು ಕೇಸರಿ ಭಯೋತ್ಪಾದನೆ ಮಾಡುತ್ತಿವೆ ಎಂದು ಶಿಂದೆ ಆರೋಪಿಸಿದ್ದರು.
ಆದಾಗ್ಯೂ, ಗುರುವಾರ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಯಾವ ನಡೆ ಕೈಗೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಅಡ್ವಾಣಿಯವರ ನಿವಾಸದಲ್ಲಿ ಬಿಜೆಪಿ ಸಭೆ ನಡೆಸಿದೆ.
ಪ್ರಸ್ತುತ ಸಭೆಯಲ್ಲಿ ಶಿಂದೆ ಹೇಳಿಕೆಯ ವಿರುದ್ಧ ಬಜೆಟ್ ಅಧಿವೇಶನದಲ್ಲಿ ಪ್ರಶ್ನಿಸಬೇಕೆಂದು ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.
ನಾವು ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುತ್ತೇನೆ. ಶಿಂದೆ ಅವರು ಲೋಕಸಭಾ ನಾಯಕರು, ಅವರು ನಮ್ಮನ್ನು ಉಗ್ರರೆಂದು ಹೇಳುತ್ತಿದ್ದಾರೆಯೇ? ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.
ಏತನ್ಮಧ್ಯೆ, ತಮ್ಮ ಹೇಳಿಕೆಯ ಬಗ್ಗೆ ಶಿಂದೆ ಕ್ಷಮೆ ಕೇಳಬೇಕು ಎಂಬುದೇ ನಮ್ಮ ಬೇಡಿಕೆ ಎಂದು ಮಾಧ್ಯಮದವರಲ್ಲಿ ಮಾತನಾಡಿದ ರವಿಶಂಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

