ಈಗಿನ ಸುದ್ದಿ

ಬಿಜೆಪಿಗೆ ಬೇಳೂರು ಗುಡ್ ಬೈ?

Published On :
ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ಬಿಜೆಪಿ ಶಾಸಕರ ಒಂದೊಂದೇ ವಿಕೆಟ್ ಪತನವಾಗುತ್ತಾ ಬರುತ್ತಿದ್ದು, ಈ ಸಾಲಿಗೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡಾ ಸೇರಿದ್ದಾರೆ.
ರಾಜ್ಯದಲ್ಲಿ ಸುಮಾರು 60 ಲಕ್ಷದಷ್ಟಿರುವ ಈಡಿಗ ಸಮುದಾಯದವರಿಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನಮಾನ ಸಿಕ್ಕಿಲ್ಲ ಎಂದು ಹೇಳಿರುವ ಬೇಳೂರು, ಬಿಜೆಪಿಗೆ ಗುಡ್ ಬೈ ಹೇಳುವುದು ಬಹುತೇಕ ಖಚಿತವಾದಂತಿದೆ.
ಬಿಜೆಪಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂದು ಹೇಳಿದ ಅವರು ಮೂರ್ನಾಲ್ಕು ಜಿಲ್ಲೆಗಳಲ್ಲಿ ಈಡಿಗ ಸಮುದಾಯ ಪ್ರಬಲವಾಗಿದೆ. ಏತನ್ಮಧ್ಯೆ, ಈಡಿಗ ಸಮುದಾಯವು
ಮುಂದೆ ಒಂದು ಶಕ್ತಿಯಾಗಿ ಬೆಳೆಯುವ ಆತಂಕದ ಕಾರಣ ಬಿಜೆಪಿ ತಮ್ಮನ್ನು ನಿಲ೯ಕ್ಷಿಸುತ್ತಿದೆ ಎಂದು  ದೂರಿದ್ದಾರೆ.
ಆದಾಗ್ಯೂ, ಬಿಜೆಪಿ ತೊರೆದ ನಂತರ ಯಾವ ಪಕ್ಷವನ್ನು ಸೇರಬೇಕೆಂಬುದರ ಬಗ್ಗೆ ತಾನು ತೀಮಾ೯ನ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಕೆಲವೊಂದು ಮೂಲಗಳ ಪ್ರಕಾರ ಬೇಳೂರು ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.