ಈಗಿನ ಸುದ್ದಿ

ಸಿಸಿಎಲ್ ಸಂಘಟನಾಕಾರರ ವಿರುದ್ಧ ಗುಡಿಗಿದ ಸಲ್ಮಾನ್

Published On :

ದೆಹಲಿ: ಹೈದ್ರಾಬಾದ್‌ನಲ್ಲಿ ಆಯೋಜಿಸಲಾಗಿದ್ದ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ತಮಗೆ ಸೂಕ್ತ ಭದ್ರತೆ ಕಲ್ಪಿಸಿಲ್ಲ ಎಂದು ಬಾಲಿವುಡ್ ನಟ ಸಲ್ಮಾನ್‌ಖಾನ್ ಅವರು ಸಿಸಿಎಲ್ ಆಯೋಜಕರ ವಿರುದ್ಧ ಬುಧವಾರ ಗುಡಿಗಿದ್ದಾರೆ.

ಲಾಲ್ ಬಹದ್ದೂರ್ ಸ್ಟೇಡಿಯಂನಿಂದ ಸಲ್ಮಾನ್ ಖಾನ್ ತಂಗಿದ್ದ ಹೋಟೆಲ್‌ವರೆಗೆ ಅಪರಿಚಿತ ವ್ಯಕ್ತಿಗಳು ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಇದರಿಂದ ಸಲ್ಮಾನ್ ಅವರಿಗೆ ಬೇಸರವುಂಟಾಗಿದೆ. ಬೈಕನಲ್ಲಿ ಹಿಂಬಾಲಿಸಿದ ವ್ಯಕ್ತಿಗಳು ಸಲ್ಮಾನ್ ಅಭಿಮಾನಿಗಳು, ಸಲ್ಮಾನ್ ಅವರ ಗಮನ ಸೆಳೆಯಲು ಅವರ ಕಾರ್‌ನ್ನು ಹಿಂಬಾಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಘಟನಕಾರರು ಹಾಗೂ ಪೊಲೀಸ್ ಇಲಾಖೆ ಬಿಗಿ ಭದ್ರತೆ ನೀಡುವಲ್ಲಿ ವಿಫಲವಾಗಿರುವದಲ್ಲದೇ, ಅಪಘಾತವಾಗುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬಂದಿದ್ದರಿಂದ ಸಲ್ಮಾನ್ ಅವರಿಗೆ ಬೇಸರವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.