ಈಗಿನ ಸುದ್ದಿ

ಕಾವೇರಿ ಅಧಿಸೂಚನೆ: ಭರ್ಜರಿ 'ಜಯಾ'

ಕಾವೇರಿ ಅಧಿಸೂಚನೆ: ಭರ್ಜರಿ 'ಜಯಾ'
Published On :

ಚೆನ್ನೈ: ಕೇಂದ್ರ ಸರ್ಕಾರ ಕಾವೇರಿ ನ್ಯಾಯಾಧೀಕರಣದ ಅಂತಿಮ ಐತೀರ್ಪಿನ ಅಧಿಸೂಚನೆ ಪ್ರಕಟಿಸಿರುವುದನ್ನು ಸ್ವಾಗತಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ವೈಯಕ್ತಿಕವಾಗಿ ತಮಗೆ ಹಾಗೂ ತಮ್ಮ ಸರ್ಕಾರಕ್ಕೆ ಸಂದ ಭರ್ಜರಿ ಜಯ ಎಂದು ಬುಧವಾರ ಹೇಳಿದ್ದಾರೆ.

ಅಧಿಸೂಚನೆ ಪ್ರಕಟಕೊಂಡ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಯಾ, ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ 22 ವರ್ಷಗಳ ಸುದೀರ್ಘ ಹೋರಾಟದ ನಂತರ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.

1991ರಿಂದ ಇಲ್ಲಿಯವರಗೆ ನಾನು ನಡೆಸಿದ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ. ಇದು ತಮಿಳುನಾಡು ರೈತರ ಜಯವೂ ಹೌದು. ಇನ್ನು ಮುಂದೆ ಕರ್ನಾಟಕದವರು ನಮಗೆ ನೀರು ಬಿಡುವುದಿಲ್ಲ ಎಂದು ಹೇಳುವಂತಿಲ್ಲ. ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಾಗುತ್ತದೆ ಎಂದು ಅವರು ಹೇಳಿದರು.

1993ರಲ್ಲಿ ಕಾವೇರಿ ನೀರಿಗಾಗಿ ನಾನು ಉಪವಾಸ ಸತ್ಯಾಗ್ರಹ ನಡೆಸಿದ್ದೆ ಎಂದು ಜಯಾ ತಿಳಿಸಿದರು.

ಇದೇ ವೇಳೆ ಕೇಂದ್ರದ ಯುಪಿಎ ಸರ್ಕಾರದ ಅಂಗ ಪಕ್ಷವಾಗಿರುವ ಡಿಎಂಕೆ ಸಹ ಕಾವೇರಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರವನ್ನು ಅಭಿನಂದಿಸಿದೆ.

ರಾಜ್ಯ ಸರ್ಕಾರದ ತೀವ್ರ ವಿರೋಧದ ನಡುವೆಯೂ ಕಾವೇರಿ ನ್ಯಾಯಾಧೀಕರಣದ ಅಂತಿಮ ಐತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಇಂದು ಗೆಜೆಟ್‌ನಲ್ಲಿ ಪ್ರಕಟಿಸಿದೆ. ಮುಂದಿನ 90 ದಿನಗಳಲ್ಲಿ ಐ ತೀರ್ಪಿನ ಆದೇಶ ಜಾರಿಗೆ ಬರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.