ಕ್ಷಮೆಯಾಚಿಸಿದ ಬಳಿಕ ಸುಷ್ಮಾ ಭೇಟಿ ಮಾಡಿದ ಶಿಂಧೆ
ನವದೆಹಲಿ: ಹಿಂದೂ ಭಯೋತ್ಪಾದನೆ ಎಂದು ಹೇಳಿಕೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ ನಂತರ ಮೊದಲ ಬಾರಿಗೆ ಕೇಂದ್ರ ಗೃಹಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರು ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ಭೇಟಿಮಾಡಿದ್ದಾರೆ.
ಗುರುವಾರ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗುವ ಕೆಲವು ನಿಮಿಷಗಳ ಮುನ್ನ ಶಿಂಧೆ ಅವರು ಸಂಸತ್ ಸಭಾಂಗಣದಲ್ಲಿ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಬಜೆಟ್ ಮತ್ತು ರೈಲ್ವೆ ಬಜೆಟ್ ಸೇರಿದಂತೆ ಪ್ರಮುಖ ಮಸೂದೆಗಳು ಈ ಅಧಿವೇಶನದಲ್ಲಿ ಮಂಡನೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಂಧೆ ಇಂದು ಸುಷ್ಮಾ ಅವರನ್ನು ಭೇಟಿ ಮಾಡಿ, ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಾಜರಿದ್ದರು ಎಂದು ತಿಳಿದು ಬಂದಿದೆ.
ಹಿಂದೂ ಭಯೋತ್ಪಾದನೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಭಾರತೀಯ ಜನತಾ ಪಕ್ಷವನ್ನು ನಿನ್ನೆ ಕ್ಷಮೆಯಾಚಿಸಿದ್ದರು. ಭಯೋತ್ಪಾದನೆಗೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಭಯೋತ್ಪಾದನೆಗೆ ಧರ್ಮ ಹಾಗೂ ರಾಜಕೀಯ ಸಂಘಟನೆ ಜತೆ ಸಂಬಂಧ ಕಲ್ಪಿಸುವ ಯಾವುದೇ ಉದ್ದೇಶ ತಮಗಿರಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

