ಈಗಿನ ಸುದ್ದಿ

ಸ್ಫೋಟದ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು: ಶಿಂಧೆ

ಸ್ಫೋಟದ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು: ಶಿಂಧೆ
Published On :

ನವದೆಹಲಿ: ಹೈದರಾಬಾದಿನಲ್ಲಿ ಸಂಭವಿಸಿರುವ ಸ್ಫೋಟದ ಕುರಿತು ಕೇಂದ್ರ ಗುಪ್ತಚರ ಇಲಾಖೆ ಮೊದಲೇ ಮಾಹಿತಿ ರವಾನಿಸಿತ್ತು ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ತಿಳಿಸಿದ್ದಾರೆ.

ಹೈದರಾಬಾದ್‌ನ ದಿಲ್ ಸುಖ್ ನಗರದಲ್ಲಿ ಇಂದು ಸಂಜೆ ನಡೆದ ಸರಣಿ ಸ್ಪೋಟದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಿಂಧೆ, ದಾಳಿ ಕುರಿತು ಈ ಹಿಂದೆಯೇ ಗುಪ್ತಚರ ಇಲಾಖೆ ಮಾಹಿತಿ ರವಾನಿಸಿತ್ತು. ಸತತ 2 ದಿನಗಳಿಂದಲೂ ಗೃಹ ಇಲಾಖೆ ಆಂದ್ರ ಪ್ರದೇಶ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ಬಗ್ಗೆ ಕೇಂದ್ರ ಸರ್ಕಾರ ಸಾಕಷ್ಟು ಮುಂಜಾಗ್ರತೆ ವಹಿಸಲು ಸೂಚಿಸಿದ್ದೆವು. ಆದರೂ ಕೂಡ ದುರ್ಘಟನೆ ನಡೆದಿರುವುದು ವಿಷಾದನೀಯ ಎಂದು ತಿಳಿಸಿದರು.

ಸ್ಪೋಟದಲ್ಲಿ ಈವರೆಗೆ 22 ಮಂದಿ ಸಾವಿಗೀಡಾಗಿದ್ದು, 60 ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಉಸ್ಮಾನಿಯಾ ವೈಧ್ಯಕೀಯ ಕೇಂದ್ರ, ಯಶೋದಾ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ದೌಡಾಯಿಸಿದ್ದು, ಘಟನಾ ಸ್ಥಳವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.