ಸ್ಫೋಟ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿತ್ತು: ಕೇಂದ್ರ

ನವದೆಹಲಿ: ಪಾಕಿಸ್ತಾನದ ಉಗ್ರ ಸಂಘಟನೆಗಳು ದಾಳಿ ನಡೆಸುವ ಸಾಧ್ಯತೆಯಿದೆ ಎಂಬುದರ ಬಗ್ಗೆ ಹೈದ್ರಾಬಾದ್ ಪೊಲೀಸರಿಗೆ ಗುರುವಾರ ಬೆಳಗ್ಗೆ ಮುನ್ನೆಚ್ಚರಿಕೆ ನೀಡಲಾಗಿತ್ತು ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಹೈದ್ರಾಬಾದ್ನ ಜನನಿಬಿಡ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಅವಳಿ ಬಾಂಬ್ ಸ್ಫೋಟದಲ್ಲಿ 16 ಮಂದಿ ಸಾವನ್ನಪ್ಪಿದ್ದು, 120 ಮಂದಿ ಗಾಯಗೊಂಡಿದ್ದರು.
ಉಗ್ರರ ಕೃತ್ಯದ ಬಗ್ಗೆ ಗೃಹ ಸಚಿವಾಲಯ ಹೈದ್ರಾಬಾದ್, ಬೆಂಗಳೂರು, ಕೊಯಂಬತ್ತೂರು ಮತ್ತು ಹುಬ್ಬಳಿಯ ಪೊಲೀಸರಿಗೆ ಮುನ್ನೆಚ್ಚರಿಕೆ ಸಂದೇಶ ರವಾನಿಸಿತ್ತು ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಮಾತ್ರವಲ್ಲದೆ ಮಹಾರಾಷ್ಟ್ರ ಮತ್ತು ಗುಜರಾತ್ ಪೊಲೀಸರಿಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿತ್ತು.
ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ನಂತರ ಉಗ್ರರು ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಫೆ.19 ಮತ್ತು ಫೆ.20ಕ್ಕೆ ಎಲ್ಲ ರಾಜ್ಯಗಳಿಗೂ ಮುನ್ನೆಚ್ಚರಿಕೆ ಸಂದೇಶಗಳನ್ನು ಕಳುಹಿಸಲಾಗಿತ್ತು ಎಂದು ಗೃಹ ಸಚಿವಾಲಯ ಹೇಳಿದೆ.
ಲಷ್ಕರೆ ತೊಯ್ಬಾ, ಜೈಷೆ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳು ದಾಳಿ ನಡೆಸುವ ಸಾಧ್ಯತೆಯಿರುವುದರಿಂದ ಭದ್ರತೆ ಬಿಗಿ ಗೊಳಿಸುವಂತೆ ಕೇಂದ್ರ ರಕ್ಷಣಾ ಏಜೆನ್ಸಿಗಳು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದ್ದವು.
ಆದಾಗ್ಯೂ, ಉಗ್ರ ಸಂಘಟನೆಗಳು ಕಸಬ್ ಮತ್ತು ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ಮುಯ್ಯಿ ತೀರಿಸಲು ನಿಷೇಧಿತ ಉಗ್ರ ಸಂಘಟನೆಯಾದ ಇಂಡಿಯನ್ ಮುಜಾಹಿದ್ದೀನ್ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ರಕ್ಷಣಾ ಏಜೆನ್ಸಿಗಳು ಬುಧವಾರ ಎಚ್ಚರಿಕೆ ನೀಡಿದ್ದವು.
ಉಗ್ರ ಸಂಘಟನೆಗಳು ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಎಲ್ಲ ರಾಜ್ಯ ಸರ್ಕಾರಗಳಿಗೆ ಮುನ್ನೆಚ್ಚರಿಕೆ ನೀಡಲಾಗಿತ್ತು ಎಂದು ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಗುರುವಾರ ಹೇಳಿದ್ದರು.
ಏತನ್ಮಧ್ಯೆ, ನಮಗೆ ಕೇಂದ್ರದಿಂದ ಸಾಮಾನ್ಯವಾಗಿ ಬರುವ ಮುನ್ನೆಚ್ಚರಿಕೆ ಆದೇಶ ಬಂದಿತ್ತಲ್ಲದೆ, ವಿಶೇಷ ಮುನ್ನೆಚ್ಚರಿಕೆ ಆದೇಶ ಬಂದಿರಲಿಲ್ಲ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


