ಹೈ ಸ್ಫೋಟ: ಮುನ್ನೆಚ್ಚರಿಕೆ ವಹಿಸುವಲ್ಲಿ ಸರ್ಕಾರ ವಿಫಲ

ನವದೆಹಲಿ: ಹೈದ್ರಾಬಾದ್ನಲ್ಲಿ ಗುರುವಾರ ಸಂಭವಿಸಿದ ಅವಳಿ ಸ್ಫೋಟದ ಬಗ್ಗೆ ಸಂಸತ್ನಲ್ಲಿ ಕೋಲಾಹಲವುಂಟಾಗಿದೆ.
ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಗದ್ದಲವುಂಟಾಗಿದ್ದು, ಮಧ್ಯಾಹ್ನ 12 ಗಂಟೆಯ ವರೆಗೆ ಸದನ ಕಲಾಪಗಳನ್ನು ಸ್ಥಗಿತಗೊಳಿಸಲಾಯಿತು. ಆದಾಗ್ಯೂ, ಮಧ್ಯಾಹ್ನ ನಂತರ ಲೋಕಸಭಾ ಕಲಾಪ ಮುಂದುವರಿದರೂ, ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2.30ರ ವರೆಗೆ ಮುಂದೂಡಲಾಯಿತು.
ಲೋಕಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕಿ, ಬಿಜೆಪಿಯ ಹಿರಿಯ ನೇತಾರೆ ಸುಷ್ಮಾ ಸ್ವರಾಜ್, ರಾಜಕೀಯ ಪಕ್ಷಗಳು ಭಯೋತ್ಪಾದಕ ಶಕ್ತಿಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಹೇಳಿದ್ದಾರೆ. ಅದೇ ವೇಳೆ ಹೈದ್ರಾಬಾದ್ ಸ್ಫೋಟ ತಡೆಯುವಲ್ಲಿ ಕೇಂದ್ರ ಹಾಗು ಆಂಧ್ರಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.
ಭಯೋತ್ಪಾದನೆಯ ವಿರುದ್ಧ ಹೋರಾಡಲು ನಮ್ಮೆಲ್ಲರ ಯೋಚನೆಗಳು ಒಂದೇ ಆಗಿರಬೇಕು. ಹಾಗಾದರೆ ಮಾತ್ರ ನಾವು ಈ ದುಷ್ಟಶಕ್ತಿಗಳ ವಿರುದ್ಧ ಹೋರಾಡಬಹುದು. ಗೃಹ ಸಚಿವರು ತಾವು ಈ ಬಗ್ಗೆ ಮೊದಲೇ ಮಾಹಿತಿ ನೀಡಿದ್ದೆವು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಮೊದಲೇ ಮಾಹಿತಿ ತಿಳಿದಿದ್ದರೂ, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕೈ ಕಟ್ಟಿ ಕುಳಿತದ್ದು ಯಾಕೆ? ಎಂದು ಸುಷ್ಮಾ ಪ್ರಶ್ನಿಸಿದ್ದಾರೆ.
ನಮ್ಮ ದೇಶದಲ್ಲಿ ಐಕ್ಯತೆಯ ಕೊರತೆಯಿದೆ, ರಾಜಕೀಯ ಪಕ್ಷಗಳು ಒಂದಾಗಬೇಕಾಗಿದೆ. ಹೀಗೆ ಒಂದಾದರೆ ಮಾತ್ರ ಭಯೋತ್ಪಾದನೆಯ ವಿರುದ್ಧ ಹೋರಾಟ ಮಾಡಲು ಸಾಧ್ಯ ಎಂದು ಸುಷ್ಮಾ ಅಭಿಪ್ರಾಯ ಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


